ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹಾನಗಲ್: ₹2.5 ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ

Published 16 ಮಾರ್ಚ್ 2024, 15:44 IST
Last Updated 16 ಮಾರ್ಚ್ 2024, 15:44 IST
ಅಕ್ಷರ ಗಾತ್ರ

ಹಾನಗಲ್: ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಆವರಣದಲ್ಲಿ ಶನಿವಾರ ಬೆಳಿಗ್ಗೆ ಶಾಸಕ ಶ್ರೀನಿವಾಸ ಮಾನೆ ಅವರು ₹2.5 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು.

ಹಾನಗಲ್ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ 1000 ಮೆಟ್ರಿಕ್ ಟನ್ ಸಾಮರ್ಥ್ಯದ ಉಗ್ರಾಣ ನಿರ್ಮಾಣ ಹಾಗೂ ಅಕ್ಕಿಆಲೂರಿನ ಉಪ ಮಾರುಕಟ್ಟೆ ಪ್ರಾಂಗಣದಲ್ಲಿ ಸಿಮೆಂಟ್ ಕಾಂಕ್ರೀಟ್ ರಸ್ತೆ ಹಾಗೂ
ಗಟಾರ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಯಿತು.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸಮಗ್ರವಾಗಿ ಅಭಿವೃದ್ಧಿ ಪಡಿಸಿ ಅಗತ್ಯ ಮೂಲಸೌಕರ್ಯ ಒದಗಿಸಲು ಕಾಳಜಿ ವಹಿಸಲಾಗಿದೆ. ವಾಣಿಜ್ಯ ಮಳಿಗೆಗಳ ನಿರ್ಮಾಣದಿಂದ ಸಮಿತಿಯ ಆದಾಯ
ಹೆಚ್ಚಳಕ್ಕೂ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.

ಎಪಿಎಂಸಿ ಕಾರ್ಯದರ್ಶಿ ಅರವಿಂದ ಸುಗಂಧಿ, ಸಹಾಯಕ ಎಂಜನಿಯರ್ ಟಿ. ಸುಭಾಸ್, ಅಧೀಕ್ಷಕ ಜಾವಿದ್ ಅಲಿ, ಮಾಜಿ ನಿರ್ದೇಶಕ ಗುರುರಾಜ್ ನಿಂಗೋಜಿ, ಪುರಸಭೆ ಸದಸ್ಯರಾದ ಖುರ್ಷಿದ್ಅಹ್ಮದ್ ಹುಲ್ಲತ್ತಿ, ಮಮತಾ ಆರೆಗೊಪ್ಪ, ಮೇಕಾಜಿ ಕಲಾಲ, ತಮ್ಮಣ್ಣ ಆರೆಗೊಪ್ಪ, ಸಂತೋಷ ಸುಣಗಾರ, ವಿನಾಯಕ ಬಂಕನಾಳ, ಇರ್ಫಾನ್ ಮಿಠಾಯಿಗಾರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT