ಹಾವೇರಿ: ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗ ವರದಿಯನ್ನು ಅಂಗೀಕರಿಸಲು ಬಿಡುವುದಿಲ್ಲ ಎಂದು ಹೇಳಿಕೆ ನೀಡುವ ಮೂಲಕ ಸಮಾಜದಲ್ಲಿ ಗೊಂದಲ ಸೃಷ್ಟಿಸುತ್ತಿರುವ ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ ಅವರನ್ನು ಕೂಡಲೇ ಸಚಿವ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಮಾದಿಗ ದಂಡೋರ ಸಮಿತಿ, ಜಿಲ್ಲಾ ಡಿಎಸ್‍ಎಸ್, ಮಾದಿಗ ಯುವ ಸೇನೆ, ಕರ್ನಾಟಕ ಭೀಮಸೇನೆ ಮುಖಂಡರು ಆಗ್ರಹಿಸಿದರು.

ತಾಲ್ಲೂಕಿನ ದೇವಗಿರಿಯ ಜಿಲ್ಲಾಡಳಿತ ಭವನದ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಸಿ, ಪ್ರಭು ಚವ್ಹಾಣರ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು.

ಡಿಎಸ್‍ಎಸ್ ರಾಜ್ಯ ಸಮಿತಿ ಸದಸ್ಯ ಉಡಚಪ್ಪ ಮಾಳಗಿ ಮಾತನಾಡಿ, ಸಚಿವರಾದ ಪ್ರಭು ಚವಾಣ್ ವತ್ತು ಶಾಸಕ ಪಿ. ರಾಜು ಅವರು ಸಮಾಜದಲ್ಲಿ ಅಶಾಂತಿ ಹುಟ್ಟು ಹಾಕುವ ದುರುದ್ದೇಶದಿಂದಲೇ ಪ್ರಚೋದನಕಾರಿ ಹೇಳಿಕೆಯನ್ನು ಕೊಡುತ್ತಾ ಪಕ್ಷದ ವರ್ಚಸ್ಸಿಗೆ ಧಕ್ಕೆ ತರುತ್ತಿದ್ದಾರೆ. ಮುಖ್ಯಮಂತ್ರಿಗಳು ತಕ್ಷಣವೇ ಇದಕ್ಕೆ ತಾರ್ಕಿಕ ಅಂತ್ಯ ಹೇಳಿ, ಸದಾಶಿವ ಆಯೋಗ ವರದಿ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.

ಸತತ ಏಳು ವರ್ಷಗಳ ಕಾಲ ನ್ಯಾಯಮೂರ್ತಿ ಎ.ಜೆ ಸದಾಶಿವ ಆಯೋಗವು ರಾಜ್ಯದಾದ್ಯಂತ ಪ್ರವಾಸ ಮಾಡಿ, ಸಮಗ್ರ ವರದಿಯನ್ನು ಸಿದ್ಧಪಡಿಸಿ, 2012ರಲ್ಲಿಸದಾನಂದ ಗೌಡರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ಹೀಗಾಗಿ ಈ ವರದಿಯನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಮಾದಿಕ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಹೊನ್ನೇಶ್ವರ ತಗಡಿನಮನಿ ಒತ್ತಾಯಿಸಿದರು.

ರಾಜ್ಯ ಉಪಾಧ್ಯಕ್ಷ ನಾಗರಾಜ ಮಾಳಗಿ, ಜಿಲ್ಲಾ ಸಂಚಾಲಕ ಮಾಲತೇಶ ಯಲ್ಲಾಪೂರ, ಬಿಎಸ್‍ಪಿ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ ಮರೆಣ್ಣನವರ, ಪ್ರೇಮಾ ಕಲಕೇರಿ, ಮಂಜಪ್ಪ ಮರೋಳ, ಮಲ್ಲೇಶಪ್ಪ ಕಡಕೋಳ, ಮಾದೇವಪ್ಪ ಮಾಳಮ್ಮನವರ, ಗುಡ್ಡಪ್ಪ ಚಿಕ್ಕಪ್ಪನವರ, ಗುಡ್ಡಪ್ಪ ಕಡಕೋಳ, ಮಾಲತೇಶ ಕಣ್ಣಮ್ಮನವರ, ಮಂಜು ದೊಡ್ಡಮರಿಯಮ್ಮನವರ, ಶ್ರೀಕಾಂತ ಗಡ್ಡಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.