ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬರ ನಿರ್ವಹಣೆ: ರಾಜ್ಯ ಸರ್ಕಾರ ವಿಫಲ’

Published 27 ಮಾರ್ಚ್ 2024, 16:07 IST
Last Updated 27 ಮಾರ್ಚ್ 2024, 16:07 IST
ಅಕ್ಷರ ಗಾತ್ರ

ಹಾನಗಲ್: ‘ದೇಶದ ಭದ್ರತೆ, ಸಮೃದ್ಧತೆ ನಿರ್ಧರಿಸುವ ಈ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಬೇಕು. ಕ್ಷೇತ್ರದ ಪ್ರತಿಯೊಬ್ಬರ ಮತಕ್ಕೆ ಗೌರವ, ಬೆಲೆ ತರುವ ರೀತಿಯಲ್ಲಿ ನಡೆದುಕೊಳ್ಳುತ್ತೇನೆ’ ಎಂದು ಹಾವೇರಿ
ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬೊಮ್ಮಾಯಿ ಭರವಸೆ ನೀಡಿದರು.

ತಾಲ್ಲೂಕಿನ ನರೇಗಲ್ ಗ್ರಾಮದಲ್ಲಿ ಈಚೆಗೆ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ಗೆ ದುಡ್ಡೆ ದೊಡ್ಡಪ್ಪ, ಆದರೆ ಪ್ರಧಾನಿ ಮೋದಿ ಅವರಿಗೆ ಕೆಲಸವೇ ದೊಡ್ಡಪ್ಪ. ದೇಶದ
ಮುಂದಿನ ಪೀಳಿಗೆ ಭವಿಷ್ಯಕ್ಕಾಗಿ ಈ ಬಾರಿ ಮತ್ತೆ ನರೇಂದ್ರ ಮೋದಿ ಪ್ರಧಾನಿಯಾಗಬೇಕು ಎಂದರು.

‘ರಾಜ್ಯದ ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಬರದ ಈ ಸ್ಥಿತಿಯಲ್ಲಿ ಜನರಿಗೆ ಕುಡಿಯಲು ನೀರು ಒದಗಿಸಲು ಸಾಧ್ಯವಾಗುತ್ತಿಲ್ಲ. ಕೃಷಿಭೂಮಿ ಇದ್ದಷ್ಟೆ ಇದೆ. ಕೇಂದ್ರದ ಕಿಸಾನ್‌ ಸಮ್ಮಾನ್‌ ಯೋಜನೆಯಲ್ಲಿ ರಾಜ್ಯದ ಪಾಲು ಬಂದ್‌ ಮಾಡಲಾಗಿದೆ’ ಎಂದು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು.

ಮಾಜಿ ಸಚಿವ ಮನೋಹರ ತಹಸೀಲ್ದಾರ್, ಮಾಜಿ ಶಾಸಕ ಶಿವರಾಜ ಸಜ್ಜನರ, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಮಹೇಶ ಕಮಡೊಳ್ಳಿ, ಮುಖಂಡರಾದ ರಾಜಶೇಖರ ಕಟ್ಟೆಗೌಡ್ರ, ಮಲ್ಲಿಕಾರ್ಜುನ
ಅಗಡಿ ಸೇರಿದಂತೆ ಅನೇಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT