ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡ್ರಗ್ಸ್‌ ದಂಧೆ: ಕಠಿಣ ಕ್ರಮಕ್ಕೆ ಮನವಿ

Last Updated 12 ಸೆಪ್ಟೆಂಬರ್ 2020, 17:03 IST
ಅಕ್ಷರ ಗಾತ್ರ

ಹಾವೇರಿ: ಡ್ರಗ್ಸ್‌ ದಂಧೆಯಲ್ಲಿ ತೊಡಗಿರುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಜಿಲ್ಲೆಯಲ್ಲಿ ಮಾದಕ ವಸ್ತು ವಹಿವಾಟು ನಡೆಯದಂತೆ ನಿಗಾ ವಹಿಸಬೇಕು ಎಂದು ಬಿಜೆಪಿ ಯುವ ಮೋರ್ಚಾ ಸದಸ್ಯರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಜಿ.ದೇವರಾಜು ಅವರಿಗೆ ಮನವಿ ಸಲ್ಲಿಸಿದರು.

ಬಿಜೆಪಿ ಯುವ ಮೋರ್ಚಾದ ಜಿಲ್ಲಾ ಘಟಕದ ಅಧ್ಯಕ್ಷ ಪವನಕುಮಾರ್‌ ಕೆ. ಮಲ್ಲಾಡದ ಸೇರಿದಂತೆ ಹಲವು ಪದಾಧಿಕಾರಿಗಳು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿಗೆ ಶನಿವಾರ ಭೇಟಿ ನೀಡಿ, ಮನವಿ ಪತ್ರ ನೀಡಿದರು.

ರಾಜ್ಯದ ನೆಮ್ಮದಿ ಮತ್ತು ಹೆಸರನ್ನು ಕೆಡಿಸಿರುವ ಮಾದಕವಸ್ತು ಮಾರಾಟ ಜಾಲ ಮತ್ತು ಸೇವನೆಯ ವಿರುದ್ಧ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಸಮರ ಸಾರಿದೆ. ಪೊಲೀಸ್‌ ಅಧಿಕಾರಿಗಳು ಕೂಡ ಅತ್ಯಂತ ಕಟ್ಟುನಿಟ್ಟಿನ ಕ್ರಮ ಜರುಗಿಸುತ್ತಿದ್ದಾರೆ. ಇದಕ್ಕೆ ಅಭಿನಂದನೆ ಸಲ್ಲಿಸುತ್ತೇವೆ ಎಂದರು.ಶಾಂತಿ, ಸಂಸ್ಕೃತಿ ಮತ್ತು ನೆಮ್ಮದಿಗೆ ಹೆಸರಾದ ನಮ್ಮ ರಾಜ್ಯವನ್ನು ಡ್ರಗ್ಸ್ ಮುಕ್ತ ರಾಜ್ಯವನ್ನಾಗಿ ನಿರ್ಮಿಸಲು ಮನವಿ ಮಾಡಿದರು.

ಹೆಚ್ಚುವರಿ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT