ಮಂಗಳವಾರ, ಜೂಲೈ 7, 2020
28 °C

ಆರ್ಥಿಕ ನೆರವು ನೀಡಲು ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಕೋವಿಡ್‌ ಲಾಕ್‌ಡೌನ್‌ನಿಂದ ವೀರಶೈವ ಜಂಗಂ ಪುರೋಹಿತರು ಹಾಗೂ ಅರ್ಚಕರ ಬದುಕು ದುಸ್ತರವಾಗಿದೆ. ಹಾಗಾಗಿ ಆರ್ಥಿಕ ನೆರವು ನೀಡಬೇಕು ಎಂದು ಹಾವೇರಿ ತಾಲ್ಲೂಕು ವೀರಶೈವ ಜಂಗಮ ಅರ್ಚಕರ ಮತ್ತು ಪುರೋಹಿತರ ಸಂಘದ ಸದಸ್ಯರು ಮಂಗಳವಾರ ಸರ್ಕಾರವನ್ನು ಒತ್ತಾಯಿಸಿದರು. 

ಎಲ್ಲ ದೇವಸ್ಥಾನ, ಮಠ ಮಂದಿರಗಳ ಪೂಜಾ ಸಮಾರಂಭ, ಜಾತ್ರೆ, ಉತ್ಸವ, ಹಬ್ಬ, ವಿವಾಹ, ಗೃಹಪ್ರವೇಶ ಮುಂತಾದ ಕಾರ್ಯಕ್ರಮಗಳು ರದ್ದಾದ ಪರಿಣಾಮ ಜೀವನ ನಿರ್ವಹಣೆ ಕಷ್ಟವಾಗಿದೆ. ಹಾಗಾಗಿ ಪರಿಹಾರ ನೀಡುವ ಮೂಲಕ ನಮ್ಮ ನೆರವಿಗೆ ಸರ್ಕಾರ ಧಾವಿಸಬೇಕು ಎಂದು ಮನವಿ ಮಾಡಿದ್ದಾರೆ. 

ತಹಶೀಲ್ದಾರ್‌ ಶಂಕರ್‌ ಅವರಿಗೆ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.