ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ’

Published 22 ನವೆಂಬರ್ 2023, 15:43 IST
Last Updated 22 ನವೆಂಬರ್ 2023, 15:43 IST
ಅಕ್ಷರ ಗಾತ್ರ

ಬ್ಯಾಡಗಿ: ದೇಶದ ಭವಿಷ್ಯ ಮಕ್ಕಳ ಕೈಯಲ್ಲಿದ್ದು, ಅವರಿಗೆ ಉತ್ತಮ ಶಿಕ್ಷಣ, ಸಂಸ್ಕೃತಿ ಹಾಗೂ ಸಂಸ್ಕಾರ ನೀಡುವುದು ಪ್ರತಿಯೊಬ್ಬ ಪಾಲಕರ ಕರ್ತವ್ಯವಾಗಿದೆ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ ಎಸ್‌.ಟಿ.ಸತೀಶ ಹೇಳಿದರು.

ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಪಟ್ಟಣದ ಕೆಎಚ್‌ಬಿ ಕಾಲೊನಿಯ ವಿನಯ ರೂರಲ್ ಡೆವಲಪಮೆಂಟ್‌ ಸೊಸೈಟಿಯ ತೆರೆದ ತಂಗುದಾಣದಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಕ್ಕಳು ಈ ದೇಶದ ಆಸ್ತಿ, ಅವರ ಹಕ್ಕುಗಳ ರಕ್ಷಣೆಗೆ ನಾವೆಲ್ಲ ಮುಂದಾಗಬೇಕು ಎಂದರು.

ತೆರೆದ ತಂಗುದಾಣದಲ್ಲಿದ್ದ 19 ಅನಾಥ ಮಕ್ಕಳಿಗೆ ಕಿರಿಯ ಸಿವಿಲ್‌ ನ್ಯಾಯಾಧೀಶ ಸುರೇಶ ವಗ್ಗನವರ ಹಣ್ಣು, ಹಂಪಲ ಮತ್ತು ನೋಟ್ ಬುಕ್‌ ವಿತರಿಸಿದರು. ಸರ್ಕಾರಿ ಸಹಾಯಕ ಅಭಿಯೋಜಕ ರಾಜಣ್ಣ ನ್ಯಾಮತಿ, ಸಿಡಿಪಿಒ ವೈ.ಟಿ.ಪೂಜಾರ, ವಕೀಲರ ಸಂಘದ ಅಧ್ಯಕ್ಷ ಎಸ್.ಎನ್.ಬಾರ್ಕಿ, ಉಪಾಧ್ಯಕ್ಷ ಬಿ.ಜಿ.ಹಿರೇಮಠ, ಕಾರ್ಯದರ್ಶಿ ಎಂ.ಪಿ.ಹಂಜಗಿ, ಸಹ ಕಾರ್ಯದರ್ಶಿ ಎಂ.ಬಿ.ಬಳಿಗಾರ, ಸದಸ್ಯರಾದ ಎಸ್.ಎಸ್.ಕೊಣ್ಣೂರ, ಎಸ್.ಎಚ್.ಕಾಟೇನಹಳ್ಳಿ, ಎಂ.ಜೆ.ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT