ಸವಣೂರು: ವಿದ್ಯಾರ್ಥಿಗಳ ಭವಿಷ್ಯ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಶಿಕ್ಷಣ ಬಹಳ ಮುಖ್ಯವಾದ ಸಾಧನವಾಗಿದೆ ಎಂದು ಶಿಗ್ಗಾವಿ ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು.

ಪಟ್ಟಣದ ಶ್ರೀಮತಿ ಗಂಗಮ್ಮ ಎಸ್. ಬೊಮ್ಮಾಯಿ ಕಾನ್ವೆಂಟ್ ಸ್ಕೂಲ್ 13ನೇ ವಾರ್ಷಿಕೋತ್ಸವ ಹಾಗೂ ಶ್ರೀಮತಿ ಗಂಗಮ್ಮ ಎಸ್. ಬೊಮ್ಮಾಯಿ ಅವರ ಜನ್ಮದಿನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಯಾರು ಉನ್ನತ ಶಿಕ್ಷಣ ಪಡೆಯುತ್ತಾರೋ ಅವರಿಗೆ ಉತ್ತಮ ಭವಿಷ್ಯವಿದೆ. ಇಂದಿನದಲ್ಲಿ ಶಿಕ್ಷಣ ಸಂಸ್ಥೆಗಳನ್ನು ನಡೆಸುವುದು ಸಾಮಾನ್ಯ ಕೆಲಸವಲ್ಲ. ಸವಣೂರಿನಂತ ಊರಿನಲ್ಲಿ ಸಂಸ್ಥೆ ಪ್ರಾರಂಭಿಸಿ, ಉತ್ತಮ ಶಿಕ್ಷಣ ನೀಡುವುದೊಂದು ಸವಾಲಿನ ಕೆಲಸ. ಆದರೆ, ಸಂಸ್ಥೆಯ ಮುಖ್ಯಸ್ಥರಾದ ಶಿವಾನಂದ ಹಾಗೂ ಶಿಕ್ಷಕರ ತಂಡವು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಸವಣೂರಿನ ಜನತೆಯ ವಿಶ್ವಾಸ ಗಳಿಸಿ ಸಂಸ್ಥೆಯನ್ನು ಮುನ್ನಡೆಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.

ಮುಂದಿನ ದಿನಗಳಲ್ಲಿ ಸವಣೂರಿನ ಯುವಕರಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಕೌಶಲ ಆಧಾರಿತ ಶಿಕ್ಷಣ ನೀಡುವ ಸಂಸ್ಥೆಗಳಿಗೆ ಆಹ್ವಾನಿಸಿ ಈ ಭಾಗದ ಯುವಕರು ದೇಶ, ವಿದೇಶಗಳಲ್ಲಿ ಉನ್ನತ ಉದ್ಯೋಗ ಕೈಗೊಳ್ಳಲು ಅನುಕೂಲ ಕಲ್ಪಿಸಲಾಗುವುದು ಎಂದರು.

ಸಂಸ್ಥೆಯ ಅಧ್ಯಕ್ಷ ಶಿವಾನಂದ ಬೋರಶೆಟ್ಟಿ, ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಶೋಭಾ ನಿಸ್ಸೀಮಗೌಡ್ರ, ಕೆಸಿಸಿ ಬ್ಯಾಂಕಿನ ನಿರ್ದೇಶಕ ಎಸ್.ಎಂ. ಗಡೆಪ್ಪನವರ, ಬಿಜೆಪಿ ಸವಣೂರು ಮಂಡಳ ಅಧ್ಯಕ್ಷ ಗಂಗಾಧರ ಬಾಣದ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಬಿ.ಎಂ.ಪಾಟೀಲ, ಮುಖಂಡರಾದ ಶ್ರೀಕಾಂತ ದುಂಡಿಗೌಡ್ರ, ಸುರೇಶ ಗಾಣಿಗೇರ, ಮುರಳಿಧರ ಶೆಂಡಗೆ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಫ್. ಬಾರ್ಕಿ, ಸಂಸ್ಥೆಯ ಉಪಾಧ್ಯಕ್ಷ ವಿನಾಯಕ ಹಿರೇಮಠ, ಕಾರ್ಯದರ್ಶಿ ರಾಜಶೇಖರ ಗುರುಸ್ವಾಮಿಮಠ, ಸಂಸ್ಥೆಯ ಆಡಳಿತಾಧಿಕಾರಿ ಶಿವಯೋಗಿ ಆರಾಧ್ಯಮಠ, ಪವಮಾನ ನಾವಾವಳಿ ಇದ್ದರು.

ಶಿಕ್ಷಕಿಯರಾದ ಜ್ಯೋತಿ ನಾಮಾವಳಿ, ಶ್ರೀದೇವಿ ನೀಲಣ್ಣನವರ ಕಾರ್ಯಕ್ರಮ ನಿರ್ವಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.