ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾದಕ ವಸ್ತು ಪತ್ತೆಯಾದರೆ ಶಿಕ್ಷಣ ಸಂಸ್ಥೆಗಳೇ ಹೊಣೆ: ಬಸವರಾಜ ಬೊಮ್ಮಾಯಿ

ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ
Last Updated 29 ಆಗಸ್ಟ್ 2020, 9:42 IST
ಅಕ್ಷರ ಗಾತ್ರ

ಹಾವೇರಿ: ‘ಶಾಲಾ–ಕಾಲೇಜು ಆರಂಭವಾದ ನಂತರ ಮಾದಕ ವಸ್ತುಗಳ ದುಷ್ಪರಿಣಾಮದ ಬಗ್ಗೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ. ಹಾಸ್ಟೆಲ್‌ ಮತ್ತು ಕಾಲೇಜು ಆವರಣದಲ್ಲಿ ಮಾದಕವಸ್ತು‌ ಪತ್ತೆಯಾದರೆ ಸಂಬಂಧಪಟ್ಟ ಶಿಕ್ಷಣ ಸಂಸ್ಥೆಗಳನ್ನು ಹೊಣೆ ಮಾಡಿ, ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿ, ಸಿಸಿಬಿಯವರು 200 ಕೆ.ಜಿ.ಯಷ್ಟು ಗಾಂಜಾ ವಶಪಡಿಸಿಕೊಂಡಿದ್ದಾರೆ.‌ ಮಾದಕ ದ್ರವ್ಯ ಜಾಲ‌‌ದ ಬಗ್ಗೆ ಕೆಲವು ಸುಳಿವುಗಳು ಸಿಕ್ಕಿವೆ. ವಿದೇಶಿಯರ ಪಾತ್ರ ಇರುವುದು ಪತ್ತೆಯಾಗಿದೆ. ದೊಡ್ಡ ಪ್ರಮಾಣದಲ್ಲಿ ಕಾರ್ಯಾಚರಣೆ ನಡೆಸಿ, ಬೇರು ಸಮೇತ ಕಿತ್ತು ಹಾಕುತ್ತೇವೆ.ತಪ್ಪಿತಸ್ಥರು ಎಷ್ಟೇ ದೊಡ್ಡವರಾಗಿದ್ದರೂ ಕ್ರಮ ನಿಶ್ಚಿತ ಎಂದು ಹೇಳಿದರು.

ತಿರುಗೇಟು

‘ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವಿದ್ದರೆ ಜನ ಬಹುಶಃ ಮಣ್ಣು ತಿನ್ನುತ್ತಿದ್ದರೇನೋ, ಆದರೆ ರಾಜ್ಯದಲ್ಲಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಸರ್ಕಾರವಿರುವುದರಿಂದ ಅಂಥ ಪರಿಸ್ಥಿತಿ ಬರುವುದಿಲ್ಲ’ ಎಂದು ಸಿದ್ದರಾಮಯ್ಯನವರ ಹೇಳಿಕೆಗೆ ತಿರುಗೇಟು ನೀಡಿದರು.

ಸಿದ್ದರಾಮಯ್ಯ ಮುತ್ಸದ್ದಿ ರಾಜಕಾರಣಿ. ಅತಿ ಹೆಚ್ಚು ಬಜೆಟ್‌ ಮಂಡಿಸಿದ್ದಾರೆ. ಜಿಎಸ್‌ಟಿಯಲ್ಲಿ ಸಮಸ್ಯೆ ಕಂಡುಬಂದರೆ ಸಲಹೆ, ಪರಿಹಾರ ಸೂಚಿಸಬೇಕೇ ಹೊರತು, ರಾಜಕಾರಣ ಮಾಡಬಾರದು ಎಂದು ಹೇಳಿದರು.

ಇಡೀ ದೇಶಕ್ಕೆ ಕೊರೊನಾ ಬಂದಿರುವುದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಆರ್ಥಿಕ ಪರಿಸ್ಥಿತಿ ಗಂಭೀರವಾಗಿದೆ. ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಎಲ್ಲವನ್ನೂ ಸಮಗ್ರವಾಗಿ ಚರ್ಚಿಸಲಾಗಿದೆ. ರಾಜ್ಯಕ್ಕೆ ಭಾರ ಆಗದಿರುವ ಒಂದು ವ್ಯವಸ್ಥೆಯನ್ನು ಕೇಂದ್ರ ಸರ್ಕಾರ ಸೂಚಿಸಿದ್ದು, ಇನ್ನೆರಡು ದಿನಗಳಲ್ಲಿ ಲಿಖಿತ ರೂಪದಲ್ಲಿ ಬರಲಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT