ಬುಧವಾರ, ಅಕ್ಟೋಬರ್ 21, 2020
24 °C

ಶಿಗ್ಗಾವಿ: ಮತಗಟ್ಟೆಗಳ ವೀಕ್ಷಣೆ, ನಿಯಮ ಪಾಲನೆಗೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿಗ್ಗಾವಿ: ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಪ್ರತಿಯೊಬ್ಬ ಅಧಿಕಾರಿಗಳು ಕಾನೂನಿನ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಯಾವುದೇ ಲೋಪ ದೋಷಗಳು ನಡೆಯದಂತೆ ಮುಂಜಾಗ್ರತೆ ವಹಿಸಬೇಕು ಎಂದು ಉಪವಿಭಾಗಾಧಿಕಾರಿ ಅನ್ನಪೂರ್ಣಾ ಮುದಕ್ಕಮ್ಮನವರ ಅಧಿಕಾರಿಗಳಿಗೆ ಸಲಹೆ ನೀಡಿದರು.

ತಾಲ್ಲೂಕಿನ ಬಂಕಾಪುರ ಪುರಸಭೆ, ಧುಂಡಸಿ ಮತ್ತು ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ತೆರೆದಿರುವ  ಚುನಾವಣಾ ಮತಗಟ್ಟೆಗಳನ್ನು ಬುಧವಾರ ವೀಕ್ಷಿಸಿದ ನಂತರ ಅವರು ಮಾತನಾಡಿದರು.

ತಾಲ್ಲೂಕಿನಲ್ಲಿ ಒಟ್ಟು 1,740 ಪದವೀಧರ ಮತದಾರರಿದ್ದು, ತಾಲ್ಲೂಕಿನ ಧುಂಡಸಿ ಗ್ರಾಮ ಪಂಚಾಯ್ತಿಯಲ್ಲಿ 1, ಬಂಕಾಪುರ ಪಟ್ಟಣದ ಪುರಸಭೆಯಲ್ಲಿ 1, ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ 2 ಮತಗಟ್ಟೆಗಳಲ್ಲಿನ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಲಾಗಿದೆ. ಪ್ರತಿ ಮತಗಟ್ಟೆಯಲ್ಲಿ ಕುಡಿಯುವ ನೀರು, ಶೌಚಾಲಯ, ವಿದ್ಯುತ್ ದೀಪಗಳ ವ್ಯವಸ್ಥೆ ಮಾಡಲಾಗುತ್ತಿದೆ. ಮುಖ್ಯವಾಗಿ ಸ್ವಚ್ಛತೆ ಕಾಪಾಡಬೇಕು. ಚುನಾವಣಾ ವಿಭಾಗದ ಆದೇಶದಂತೆ ಪ್ರತಿಯೊಂದು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಕೋವಿಡ್-19 ನಿಯಮಾವಳಿ ಪಾಲಿಸಿಕೊಂಡು ಪರಸ್ಪರ ಅಂತರ, ಸ್ಯಾನಿಟೈಜರ್ ಬಳಿಕೆ ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು ಸರತಿಯಲ್ಲಿ ನಿಂತು ಮತದಾನ ಮಾಡಲು ಎಲ್ಲ ವ್ಯವಸ್ಥೆ ಮಾಡಲಾಗುತ್ತಿದೆ. ಈ ಕುರಿತು ಎಲ್ಲ ಅಧಿಕಾರಿಗೊಂದಿಗೆ ಚರ್ಚಿಸಿ ಸೂಚನೆ ನೀಡಲಾಗಿದೆ. ಹಾಗೆಯೇ ಬಂಕಾಪುರ ನಾಡಕಚೇರಿಗೆ ಭೇಟಿ ನೀಡಿ ದುರಸ್ತಿ ಕಾರ್ಯ ಕೈಗೊ ಳ್ಳುವಂತೆ ಸಲಹೆ ನೀಡಲಾಗಿದೆ ಎಂದರು.

ತಹಶೀಲ್ದಾರ್ ಪ್ರಕಾಶ ಕುದರಿ, ಶಿರಸ್ತೇದಾರ ಗಣೇಶ ಸವಣೂರ, ಪುರಸಭೆ ಮುಖ್ಯಾಧಿಕಾರಿ ರೇಣುಕಾ ದೇಸಾಯಿ, ಧುಂಡಸಿ ಉಪತಹಶೀಲ್ದಾರ್ ಬಸವರಾಜ ಹೊಂಕಳೆಪ್ಪನವರ, ಬಂಕಾಪುರ ಉಪತಹಶೀಲ್ದಾರ್ ಎಂ.ಎಸ್.ಪಾಟೀಲ ಸೇರಿದಂತೆ ತಹಶೀಲ್ದಾರ್ ಕಚೇರಿ, ಪುರಸಭೆ ಸಿಬ್ಬಂದಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.