ಬುಧವಾರ, ಆಗಸ್ಟ್ 17, 2022
26 °C

ಚುನಾವಣಾ ಸಿದ್ಧತೆ: ವೀಕ್ಷಕರಿಂದ ಪರಿಶೀಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆಯ ಜಿಲ್ಲಾ ವಿಕ್ಷಕರಾದ ಡಾ.ರಾಜೇಂದ್ರ ಹೊನ್ನಳ್ಳಿ ಅವರು ಬುಧವಾರ ಶಿಗ್ಗಾವಿ ತಾಲ್ಲೂಕಿಗೆ ಭೇಟಿ ನೀಡಿ ಎಒಎ ಶಾಲೆ ಭದ್ರತಾ ಕೊಠಡಿ, ಮತಗಟ್ಟೆ ಅಧಿಕಾರಿಗಳ ತರಬೇತಿ ಕೇಂದ್ರ, ಮಸ್ಟರಿಂಗ್ ಹಾಗೂ ಡಿ ಮಸ್ಟರಿಂಗ್ ಕಾರ್ಯಗಳಿಗೆ ಕೈಗೊಂಡಿರುವ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದರು.

ಬುಧವಾರ ತಹಶೀಲ್ದಾರ್‌ ಕಾರ್ಯಾಲಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ತಾಲ್ಲೂಕಿನಲ್ಲಿ ಕೈಗೊಂಡಿರುವ ಸಿದ್ಧತೆಗಳ ಕುರಿತಂತೆ ಅಧಿಕಾರಿಗಳ ಸಭೆ ನಡೆಸಿ, ಚುನಾವಣಾ ಕಾರ್ಯದಲ್ಲಿ ಯಾವುದೇ ಲೋಪವಾಗದಂತೆ ಎಚ್ಚರವಹಿಸಿ ಆಯೋಗದ ಮಾರ್ಗಸೂಚಿಯಂತೆ ಕಾರ್ಯನಿರ್ವಹಿಸಲು ಅಧಿಕಾರಿಗಳಿಗೆ ಸಲಹೆ ನೀಡಿದರು.

ಸವಣೂರ ತಾಲ್ಲೂಕಿಗೆ ಭೇಟಿ ನೀಡಿ ತಾಲ್ಲೂಕು ಕಚೇರಿಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಸಿದ್ಧತೆಗಳು, ಮಸ್ಟರಿಂಗ್ ಮತ್ತು ಡಿ ಮಸ್ಟರಿಂಗ್ ವ್ಯವಸ್ಥೆ, ಮತ ಎಣಿಕೆ ಕೇಂದ್ರದ ಸಿದ್ಧತೆ, ಸಿಬ್ಬಂದಿಗಳ ತರಬೇತಿ, ಮತಗಟ್ಟೆಗಳ ಸೌಲಭ್ಯಗಳ ಕುರಿತಂತೆ ಅಧಿಕಾರಗಳಿಂದ ಮಾಹಿತಿ ಪಡೆದರು.

ಮತದಾರರಿಗೆ ಮತಗಟ್ಟೆಗಳಲ್ಲಿ ಕಲ್ಪಿಸಬೇಕಾದ ಸೌಲಭ್ಯಗಳು, ಕೋವಿಡ್ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳ ಕುರಿತಂತೆ ಅಧಿಕಾರಿಗಳೊಂದಿಗೆ ಚರ್ಚಿಸಿ ರಾಜ್ಯ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ವಿವರಿಸಿದರು.

ಸಭೆಯಲ್ಲಿ ಸವಣೂರು ಉಪವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮನವರ, ಚುನಾವಣಾ ನೋಡಲ್ ಅಧಿಕಾರಿ ಕೃಷಿ ಜಂಟಿ ನಿರ್ದೇಶಕ ಮಂಜುನಾಥ, ಶಿಗ್ಗಾವಿ ತಹಶೀಲ್ದಾರ್‌ ಕುದರಿ, ಸವಣೂರ ತಹಶೀಲ್ದಾರ್‌ ಮಲ್ಲಿಕಾರ್ಜುನ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು, ಉಪ ಪೋಲಿಸ್ ಅಧೀಕ್ಷಕರು, ವಿವಿಧ ಠಾಣೆಗಳ ಸಿ.ಪಿ.ಐ ಹಾಗೂ ಪಿ.ಎಸ್.ಐ, ಎಲ್ಲ ಸೆಕ್ಟರ್ ಅಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು