ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿ: ಸ್ಥಳೀಯ ಸಂಸ್ಥೆ ಚುನಾವಣೆ, ಮೀಸಲಾತಿ ಪ್ರಕಟ

ಚುನಾವಣಾಧಿಕಾರಿಗಳ ನೇಮಕ ಮಾಡಿ ಜಿಲ್ಲಾಧಿಕಾರಿ ಆದೇಶ
Last Updated 9 ಅಕ್ಟೋಬರ್ 2020, 20:30 IST
ಅಕ್ಷರ ಗಾತ್ರ

ಹಾವೇರಿ: ಜಿಲ್ಲೆಯ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗಾಗಿ ಚುನಾವಣೆ ನಡೆಸಲು ಚುನಾವಣಾಧಿಕಾರಿಗಳನ್ನು ನೇಮಕ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಹಾವೇರಿ ನಗರಸಭೆ ಹಾಗೂ ರಾಣೆಬೆನ್ನೂರು ನಗರಸಭೆಗೆ ಹಾವೇರಿ ಉಪವಿಭಾಗಾಧಿಕಾರಿ, ಬ್ಯಾಡಗಿ, ಸವಣೂರ, ಶಿಗ್ಗಾವಿ ಹಾಗೂ ಹಾನಗಲ್ ಪುರಸಭೆ ಮತ್ತು ಹಿರೇಕೆರೂರ ಹಾಗೂ ಗುತ್ತಲ ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ನಡೆಸಲು ಆಯಾ ತಾಲ್ಲೂಕು ತಹಶೀಲ್ದಾರ್‌ಗಳನ್ನು ಚುನಾವಣಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ.

ಮೀಸಲಾತಿ ಪ್ರಕಟ:ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ನಿಗದಿಪಡಿಸಿ ಈಗಾಗಲೇ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿಗಳು ಅಧಿಸೂಚನೆ ಹೊರಡಿಸಿದ್ದಾರೆ. ಹಾವೇರಿ ನಗರಸಭೆಯ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ಎ ಮಹಿಳೆಗೆ, ರಾಣೆಬೆನ್ನೂರ ನಗರಸಭೆ ಅಧ್ಯಕ್ಷ ಸ್ಥಾನ ಹಿಂದುಳಿದ ಎ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳಾ ವರ್ಗಕ್ಕೆ ಮೀಸಲಾಗಿದೆ.

ಬ್ಯಾಡಗಿ ಪುರಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ಎ ಮಹಿಳೆಗೆ, ಹಾನಗಲ್‌ ಪುರಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನ ಹಿಂದುಳಿದ ಎ ವರ್ಗಕ್ಕೆ, ಸವಣೂರ ಪುರಸಭೆ ಅಧ್ಯಕ್ಷ ಸ್ಥಾನ ಹಿಂದುಳಿದ ಬಿ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ, ಶಿಗ್ಗಾಂವ ಪುರಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ವರ್ಗಕ್ಕೆ ಮೀಸಲಾಗಿದೆ.

ಹಿರೇಕೆರೂರ ಪಟ್ಟಣ ಪಂಚಾತಿಯ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಹಾಗೂ ಗುತ್ತಲ ಪಟ್ಟಣ ಪಂಚಾಯಿತಿಯ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ‘ಎ’ ಮಹಿಳೆಗೆ ಹಾಗೂ ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಿರಿಸಿ ಅಧಿಸೂಚನೆ ಪ್ರಕಟಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT