ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು: ಚಂದನರಾಣಿ ದೊಡ್ಡಮನಿ

ಕಾಂಗ್ರೆಸ್ ಪಕ್ಷದ ಟಿಕೆಟ್‌ ಆಕಾಂಕ್ಷಿ ಚಂದನರಾಣಿ ದೊಡ್ಡಮನಿ ಹೇಳಿಕೆ
Last Updated 12 ಅಕ್ಟೋಬರ್ 2022, 12:23 IST
ಅಕ್ಷರ ಗಾತ್ರ

ಹಾವೇರಿ: ‘ಜಿಲ್ಲೆಯಾಗಿ 25 ವರ್ಷಗಳಾಗಿದ್ದು, ಜಿಲ್ಲಾ ಕೇಂದ್ರ ನೀರಿಕ್ಷಿತಮಟ್ಟದಲ್ಲಿ ಅಭಿವೃದ್ಧಿಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯ ಕನಸಿನೊಂದಿಗೆ 2023ರ ವಿಧಾನಸಭಾ ಚುನಾವಣೆಯಲ್ಲಿ ಹಾವೇರಿ ಮೀಸಲು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧರಿಸಿದ್ದು, ನನಗೆ ಬೆಂಬಲ ನೀಡಬೇಕು’ ಎಂದು ಕಾಂಗ್ರೆಸ್ ಪಕ್ಷದ ಟಿಕೆಟ್‌ ಆಕಾಂಕ್ಷಿ ಚಂದನರಾಣಿ ದೊಡ್ಡಮನಿ ಮನವಿ ಮಾಡಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಹಿಳಾ ಕಾಂಗ್ರೆಸ್ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಐದಾರು ವರ್ಷಗಳಿಂದ ಜಿಲ್ಲೆಯಲ್ಲಿ ಪಕ್ಷ ವಹಿಸಿದ ಜವಾಬ್ದಾರಿಗಳನ್ನು ನಿರ್ವಹಿಸಿದ್ದೇನೆ. ಕ್ಷೇತ್ರದ ಜನರೊಂದಿಗೆ ನಿರಂತರ ಸಂಪರ್ಕ ಹೊಂದಿದ್ದೇನೆ. ಪಕ್ಷದ ಮುಖಂಡರು ಈ ಬಾರಿ ಹಾವೇರಿ ಮೀಸಲು ವಿಧಾನಸಭಾ ಕ್ಷೇತ್ರಕ್ಕೆ ಮಹಿಳೆಯರಿಗೆ ಅವಕಾಶ ಮಾಡಿಕೊಡುವ ವಿಶ್ವಾಸವಿದ್ದು, ಪಕ್ಷದ ಮುಖಂಡರು ಕೈಗೊಳ್ಳುವ ನಿರ್ಧಾರಕ್ಕೆ ಬದ್ಧಳಾಗಿದ್ದೇನೆ’ ಎಂದರು.

ಮುಖ್ಯಮಂತ್ರಿ ತವರು ಜಿಲ್ಲೆಯಾದರೂ ನಿರೀಕ್ಷಿತ ಮಟ್ಟದಲ್ಲಿ ಜಿಲ್ಲೆಗೆ ಅನುದಾನ ಹರಿದು ಬಂದಿಲ್ಲ. ಯುವಕರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಬೃಹತ್ ಕೈಗಾರಿಕೆಗಳು ಸ್ಥಾಪನೆಗೊಂಡಿಲ್ಲ. ಅಲ್ಲದೇ ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡಲು ಸೂಪರ್ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆ ಸಹ ಆರಂಭಗೊಂಡಿಲ್ಲ. ಹೀಗಾಗಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಕುಂಠಿತಗೊಂಡಿದ್ದು, ಜನರಿಗೆ ಸೌಲಭ್ಯಗಳನ್ನು ಕಲ್ಪಿಸಿ, ಕ್ಷೇತ್ರದ ಅಭಿವೃದ್ಧಿ ಕೈಗೊಂಡು ಜನರ ಸೇವೆ ಮಾಡಲು ನನಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷ ಸುಭಾನಿ ಚೂಡಿದಾರ, ಜುನೈ ಶೇಖ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT