ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

24 ಸರ್ಕಾರಿ ಇಂಗ್ಲಿಷ್‌ ಮಾಧ್ಯಮ ಶಾಲೆ

ಮೇ 28ರಂದು ಶೈಕ್ಷಣಿಕ ಪ್ರಾರಂಭೋತ್ಸವ: ಶಿಕ್ಷಕರಿಗೆ ವಿಶೇಷ ತರಬೇತಿ
Last Updated 19 ಮೇ 2019, 14:48 IST
ಅಕ್ಷರ ಗಾತ್ರ

ಹಾವೇರಿ: ಈ ಶೈಕ್ಷಣಿಕ ವರ್ಷದಿಂದ ಜಿಲ್ಲೆಯ 24 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್‌ ಮಾಧ್ಯಮ ತರಗತಿಗಳು ಆರಂಭಗೊಳ್ಳಲಿವೆ.

ಈ ಬಾರಿ ಒಂದನೇ ತರಗತಿ ಆರಂಭಗೊಳ್ಳಲಿದ್ದು, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ವತಿಯಿಂದ ಶಿಕ್ಷಕರಿಗೆ ರಾಜ್ಯ ಮಟ್ಟದ ಸಂಪನ್ಮೂಲ ವ್ಯಕ್ತಿಗಳು 15 ದಿನಗಳ ಕಾಲ ತರಬೇತಿ ನೀಡುತ್ತಿದ್ದಾರೆ.

‘ಈಗಾಗಲೇ ಇಂಗ್ಲಿಷ್‌ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕರ ಸಭೆ ನಡೆಸಿ, ಶಾಲೆ ಪ್ರಾರಂಭಿಸಲು ಬೇಕಾದ ಅವಶ್ಯಕ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ.ಶಾಲೆಗಳಿಗೆ ಇಂಗ್ಲಿಷ್‌ ಮಾಧ್ಯಮ ಪಠ್ಯಪುಸ್ತಕಗಳನ್ನು ಪೂರೈಸಲಾಗುತ್ತಿದೆ. ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಮೇ 28ರಂದು ನಡೆಯಲಿದೆ. ಪೋಷಕರು ತಮ್ಮ ಮಕ್ಕಳ ದಾಖಲಾತಿ ಮಾಡಿಸಿಕೊಳ್ಳಬಹುದು’ ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲ, ಇಲಾಖಾ ಉಪನಿರ್ದೇಶಕ (ಅಭಿವೃದ್ಧಿ) ಜಿ.ಎಂ.ಬಸವಲಿಂಗಪ್ಪ ತಿಳಿಸಿದ್ದಾರೆ.

ಶಾಲೆಗಳ ವಿವರ:
ಬ್ಯಾಡಗಿ: ಬ್ಯಾಡಗಿ, ಬುಡುಪನಹಳ್ಳಿ, ಹಾಗೂ ಬಿಸಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳು.

ಹಾನಗಲ್: ಆಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಮಾಡೆಲ್ ಶಾಲೆಗಳು, ವರ್ದಿ ಹಾಗೂ ಬೆಳಗಾಲಪೇಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಆರ್.ಎಂ.ಎಸ್.ಎ. ಉನ್ನತೀಕರಿಸಿದ ಶಾಲೆ.

ಹಾವೇರಿ: ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಾದರಿ ನಂ.2, ಕರ್ಜಗಿ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆ, ಕೂರಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಆರ್.ಎಂ.ಎಸ್.ಎ. ಉನ್ನತೀಕರಿಸಿದ ಶಾಲೆ, ನಾಗೇಂದ್ರನಮಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಕಬ್ಬೂರ ಕುವೆಂಪು ಮಾದರಿ ಪ್ರಾಥಮಿಕ ಶಾಲೆ.

ಹಿರೇಕೆರೂರ: ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆ, ದೂದಿಹಳ್ಳಿ, ನೂಲಿಗೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳು.

ರಾಣೆಬೆನ್ನೂರು: ನಗರದ ಮಾರುತಿ ನಗರದ ನಂ.17 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳು ಹಾಗೂ ಅರೇಮಲ್ಲಾಪುರ, ಇಟಗಿ, ಹರನಗಿರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳು.

ಸವಣೂರ: ಚಿಲ್ಲೂರಬಡ್ನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ

ಶಿಗ್ಗಾವಿ: ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಹಿರಿಯ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆ ಹಾಗೂ ನಾರಾಯಣಪುರ ಸರ್ಕಾರಿ ಪ್ರಾಥಮಿಕ ಶಾಲೆಗಳು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT