ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿ: ಉದ್ಯೋಗ ತರಬೇತಿ ಕೇಂದ್ರ ಸ್ಥಾಪನೆಗೆ ಒತ್ತಾಯ

Last Updated 12 ಅಕ್ಟೋಬರ್ 2020, 11:49 IST
ಅಕ್ಷರ ಗಾತ್ರ

ಹಾವೇರಿ: ‘ಪದವೀಧರರ ಬೇಡಿಕೆ ಈಡೇರಿಸುವಲ್ಲಿ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ವಿಫಲರಾಗುತ್ತಿದ್ದು, ಕ್ಷೇತ್ರದ ಬುದ್ಧಿವಂತ ಮತದಾರರು ಪಕ್ಷೇತರ ಅಭ್ಯರ್ಥಿಯಾದ ನನ್ನನ್ನು ಈ ಬಾರಿ ಪಶ್ಚಿಮ ಪದವೀಧರರ ಚುನಾವಣೆಯಲ್ಲಿ ಬಹುಮತದಿಂದ ಗೆಲ್ಲಿಸುವ ವಿಶ್ವಾಸವಿದೆ’ ಎಂದು ಪಕ್ಷೇತರ ಅಭ್ಯರ್ಥಿ ಶಿವಕುಮಾರ ತಳವಾರ ಹೇಳಿದರು.

ಹಾವೇರಿ ನಗರದಲ್ಲಿ ಪಶ್ಚಿಮ ಪದವೀಧರ ವಿಧಾನ ಪರಿಷತ್ ಸದಸ್ಯರ ಚುನಾವಣೆಯ ಮತದಾರರ ಮನೆ–ಮನೆಗಳಿಗೆ ತೆರಳಿ ಪ್ರಚಾರ ಸಂದರ್ಭದಲ್ಲಿ ಅವರು ಪ್ರತಿಕ್ರಿಯಿಸಿದರು.

‘ಈ ಬಾರಿ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ 4 ಜಿಲ್ಲೆಗಳಲ್ಲಿ ನಿರುದ್ಯೋಗಿ ಪದವೀಧರರಿಗೆ ಉದ್ಯೋಗ ತರಬೇತಿ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗುವುದು. ಸರ್ಕಾರಿ, ಅರೆ ಸರ್ಕಾರಿ, ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಹಾಗೂ ಐಟಿ– ಬಿಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಮಾತ್ರ ಉದ್ಯೋಗವಕಾಶ ನೀಡುವ ಕಾನೂನು ಮಾಡಲು ಹೋರಾಟ ಮಾಡಲಾಗುವುದು’ ಎಂದರು.

ಪರಶುರಾಮ ಬಾರ್ಕಿ, ಜಗದೀಶ ಕುಲಕರ್ಣಿ, ಯಲ್ಲಪ್ಪ ಗುಡ್ಡಪ್ಪನವರ, ಬ್ರಹ್ಮಾನಂದ, ಮಹ್ಮದ್‌ ಷರೀಫ್‌, ಮಂಜುನಾಥ ಮುಗದೂರ, ಗೌತಮ ಕಂಬಳಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT