‘ತೋಟಗಾರಿಕೆ ಬೆಳೆಗಳಿಗೆ ಉತ್ತೇಜನ’
‘ಕಂದಾಯ ಇಲಾಖೆ ಜಾಗವನ್ನು ಮಾವು ಸಂಸ್ಕರಣಾ ಘಟಕ ನಿರ್ಮಾಣಕ್ಕೆ ಬಳಸಿಕೊಳ್ಳುವ ಪ್ರಕ್ರಿಯೆ ಪೂರ್ಣಗೊಂಡಿದೆ. ಖಾಸಗಿ ಸಂಸ್ಥೆಯೊಂದು ಸ್ಥಳ ಸಮೀಕ್ಷೆ ಮಣ್ಣು ಪರೀಕ್ಷೆ ಮತ್ತು ನೀರಿನ ಲಭ್ಯತೆಗಳ ವರದಿ ಸಿದ್ಧಪಡಿಸಿ ಅಧಿಕಾರಿಗಳಿಗೆ ಸಲ್ಲಿಸಿದೆ’ ಎಂದು ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಬಣಕಾರ ತಿಳಿಸಿದರು. ‘ಈ ವರದಿ ಆಧಾರದ ಮೇಲೆ ರಾಜ್ಯ ಸರ್ಕಾರ ಮಾವು ಸಂಸ್ಕರಣಾ ಘಟಕ ನಿರ್ಮಾಣಕ್ಕೆ ಮುಂದಾಗುತ್ತಿದ್ದು ಇದರಿಂದ ಈ ಭಾಗದ ತೋಟಗಾರಿಕೆ ಬೆಳೆಗಳಿಗೆ ಹೆಚ್ಚು ಉತ್ತೇಜನ ಸಿಗಲಿದೆ’ ಎಂದು ಹೇಳಿದರು.