ಕೈಗಾರಿಕೆ ಸ್ಥಾಪನೆಗೆ ಪ್ರೋತ್ಸಾಹ

7
ಜಿಲ್ಲಾ ಮಟ್ಟದ ಕೈಗಾರಿಕಾ ವಸ್ತು ಪ್ರದರ್ಶನದಲ್ಲಿ ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ.

ಕೈಗಾರಿಕೆ ಸ್ಥಾಪನೆಗೆ ಪ್ರೋತ್ಸಾಹ

Published:
Updated:
Prajavani

ಹಾವೇರಿ: ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪನೆಗೆ ಪೂರಕ ವಾತಾವರಣದ ಸೃಷ್ಟಿ ಹಾಗೂ ಕೌಶಲ ತರಬೇತಿಗೆ ಜಿಲ್ಲಾಡಳಿತ ಹೆಚ್ಚಿನ ಅಸ್ಥೆ ನೀಡುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್‌ ಎಂ.ವಿ. ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಗ್ರಾಮೀಣ ಮತ್ತು ಸಣ್ಣ ಉದ್ಯಮ ವಿಭಾಗ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಯೋಗದಲ್ಲಿ ನಗರದ ಜಿಲ್ಲಾ ಗುರುಭವನದಲ್ಲಿ ಗುರುವಾರ ಆರಂಭಗೊಂಡ ಮೂರು ದಿನಗಳ ಜಿಲ್ಲಾ ಮಟ್ಟದ ಕೈಗಾರಿಕಾ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜಿಲ್ಲೆಯು ಕೃಷಿ ಪ್ರಧಾನವಾಗಿದ್ದು, ಇಲ್ಲಿ ಸಂಸ್ಕರಣಾ ಕೈಗಾರಿಕೆಗಳಿಗೆ ವಿಫುಲ ಅವಕಾಶವಿದೆ. ಜಿಲ್ಲೆಗೆ ಬರುವ ಕೈಗಾರಿಕೆಗಳಿಗೆ ಬೇಕಾದ ಬೆಂಬಲಗಳನ್ನು ನೀಡಲಾಗುವುದು ಎಂದರು.

1992ರ ಉದಾರೀಕರಣ ಮತ್ತು ಜಾಗತೀಕರಣದ ಬಳಿಕ ವಿದೇಶಿ ವಸ್ತುಗಳು ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಇವುಗಳ ದಾಳಿಯಿಂದ ಪಾರಂಪರಿಕ ಹಾಗೂ ಗುಡಿ ಕೈಗಾರಿಕೆಗಳನ್ನು ರಕ್ಷಿಸುವುದು ಸರ್ಕಾರ ಹಾಗೂ ಸಾರ್ವಜನಿಕರ ಕರ್ತವ್ಯ ಎಂದರು.

ಇಲ್ಲಿ ಪ್ರದರ್ಶನಗೊಂಡ ವಸ್ತುಗಳು ಗುಣಮಟ್ಟದಿಂದ ಕೂಡಿವೆ. ಈ ವಸ್ತುಗಳನ್ನು ಖರೀದಿಸುವ ಮೂಲಕ ಸಣ್ಣ ಉದ್ಯಮವನ್ನು ಪ್ರೋತ್ಸಾಹಿಸಬೇಕು ಎಂದರು.

ಜಿಲ್ಲಾ ಪಂಚಾಯ್ತಿ ಸದಸ್ಯರಾದ ಸಿದ್ದರಾಜ ಕಲಕೋಟಿ ಹಾಗೂ ವಿರೂಪಾಕ್ಷಪ್ಪ ಕಡ್ಲಿ ಮಾತನಾಡಿ, ಗ್ರಾಮೀಣ, ಗುಡಿ ಕೈಗಾರಿಕೆಗಳನ್ನು ಪ್ರೋತ್ಸಾಹಿಸಬೇಕು ಎಂದರು.

ಗ್ರಾಮೀಣ ಮತ್ತು ಸಣ್ಣ ಉದ್ಯಮ ವಿಭಾಗದ ಉಪನಿರ್ದೇಶಕ ಎ.ಕೆ.ತಿಮ್ಮಾಪೂರ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಸಿದ್ದರಾಜ ಇದ್ದರು.  

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !