ಗುರುವಾರ , ಅಕ್ಟೋಬರ್ 22, 2020
27 °C

ಹಾವೇರಿ: ನಕಲಿ ಗುರುತಿನ ಚೀಟಿ, ಕಠಿಣ ಕ್ರಮದ ಎಚ್ಚರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾವೇರಿ: ಅನಧಿಕೃತ ವೆಬ್‍ಸೈಟ್ ಅಥವಾ ಪೊರ್ಟ್‍ಲ್‍ಗಳಿಂದ ಸೇವೆ ಗಳನ್ನು ನೀಡುವುದಾಗಲಿ, ನಕಲಿ ಗುರುತು ಪತ್ರಗಳನ್ನು ಮುದ್ರಿಸಿ ಕೊಡುವು ದಾಗಲಿ ಕಂಡು ಬಂದರೆ ಸಾಮಾನ್ಯ ಸೇವಾ ಕೇಂದ್ರಗಳ ಪರವಾನಗಿ ರದ್ದು ಮಾಡಲಾಗುವುದು ಹಾಗೂ ಕಠಿಣ ಕ್ರಮಕ್ಕೆ ಶಿಫಾರಸು ಮಾಡಲಾಗುವುದು ಎಂದು ಜಿಲ್ಲಾ ಸಾಮಾನ್ಯ ಸೇವಾ ಕೇಂದ್ರದ ಜಿಲ್ಲಾ ವ್ಯವಸ್ಥಾಪಕ ಕೃಷ್ಣಕಾಂತ ತಿಳಿಸಿದ್ದಾರೆ.

ಕೇಂದ್ರದ ವಿದ್ಯುನ್ಮಾನ, ತಾಂತ್ರಿಕ ಮಂತ್ರಾಲಯದ ಸಂಯೋಜನೆಯಿಂದ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಾಮಾನ್ಯ ಸೇವಾ ಕೇಂದ್ರಗಳು ಸರ್ಕಾರದ ಮಾರ್ಗಸೂಚಿಯಂತೆ ಅಧಿಕೃತಗೊಳಿಸಿದ ಯೋಜನೆಗಳ ಸೇವೆ ಗಳನ್ನು ಮಾತ್ರ ನೀಡಬೇಕು. ಚುನಾವಣಾ ಆಯೋಗದಿಂದ ಮತದಾರರ ಗುರುತಿನ ಚೀಟಿಗೆ ಸಂಬಂಧಿಸಿದಂತೆ ಇನ್ನೂ ಪ್ರಕ್ರಿಯೆ ಹಂತದಲ್ಲಿದ್ದು, ಇದುವರೆಗೆ ಸಕ್ರಿಯಗೊಂಡಿಲ್ಲ. ಚುನಾವಣಾ ಆಯೋಗದ ನಿಯಮಾವಳಿಗಳನ್ನು ಉಲ್ಲಂಘಿಸಿ ಯಾವುದೇ ಸಾಮಾನ್ಯ ಸೇವಾ ಕೇಂದ್ರಗಳು ವೋಟರ್ ಐಡಿ ಕಾರ್ಡ್ ಮುದ್ರಿಸಿ ಕೊಡುವುದು ಕಾನೂನಿನ ಪ್ರಕಾರ ಅಪರಾಧ ಎಂದು ಅವರು ಎಚ್ಚರಿಸಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.