ಗುರುವಾರ, 12 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬ್ಯಾಡಗಿ: ರೈತ ಆತ್ಮಹತ್ಯೆ

Published 11 ಆಗಸ್ಟ್ 2024, 15:57 IST
Last Updated 11 ಆಗಸ್ಟ್ 2024, 15:57 IST
ಅಕ್ಷರ ಗಾತ್ರ

ಬ್ಯಾಡಗಿ: ತಾಲ್ಲೂಕಿನ ಬನ್ನಿಹಟ್ಟಿ ಗ್ರಾಮದ ರೈತ ಕುರುವತ್ತೆಪ್ಪ ಪುಟ್ಟಪ್ಪ ಪೂಜಾರ (56) ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ಮಧ್ಯಾಹ್ನ ಬೆಳಕಿಗೆ ಬಂದಿದೆ.

ಇವರು ಕೃಷಿಗಾಗಿ ಕೆವಿಜಿ ಬ್ಯಾಂಕ್‌, ಪಿಎಲ್‌ಡಿ ಬ್ಯಾಂಕ್‌, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಇತರ ಕಡೆ ಸಾಲ ಮಾಡಿಕೊಂಡಿದ್ದರು. ಪ್ರಸಕ್ತ ಸುರಿದ ಅತಿಯಾದ ಮಳೆಯಿಂದ ಹತ್ತಿ ಬೆಳೆ ಬಾರದೇ ಹಾನಿ ಅನುಭವಿಸಿದ್ದರಿಂದ ಮಾಡಿದ ಸಾಲ ಹೇಗೆ ತೀರಿಸುವುದು ಎಂದು ಚಿಂತೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಬ್ಯಾಡಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT