ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ’

Published 27 ಮಾರ್ಚ್ 2024, 16:07 IST
Last Updated 27 ಮಾರ್ಚ್ 2024, 16:07 IST
ಅಕ್ಷರ ಗಾತ್ರ

ಬ್ಯಾಡಗಿ: ‘ಕಾಂಗ್ರೆಸ್‌ ನೇತೃತ್ವದ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ನೀಡಿದ ಅಭೂತಪೂರ್ವ ಯಶಸ್ಸನ್ನು ಲೋಕಸಭಾ ಚುನಾವಣೆಯಲ್ಲಿಯೂ ನೀಡಿ’ ಎಂದು ಅರಣ್ಯ ನಿಗಮದ ಅಧ್ಯಕ್ಷ, ಶಾಸಕ ಬಸವರಾಜ ಶಿವಣ್ಣನವರ ಮನವಿ ಮಾಡಿದರು.

ಪಟ್ಟಣದ ಸಂಗಮೇಶ್ವರ ನಗರದ ತಮ್ಮ ನಿವಾಸದಲ್ಲಿ ಬುಧವಾರ ಆಯೋಜಿಸಿದ್ದ ಅಲ್ಪಸಂಖ್ಯಾತ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು.

‘ಕಾಂಗ್ರೆಸ್ ಪಕ್ಷಕ್ಕೆ ಲೋಕಸಭಾ ಚುನಾವಣೆ ನಿರ್ಣಾಯಕವಾಗಲಿದ್ದು, ಪಕ್ಷದ ಅಭ್ಯರ್ಥಿಯಾದ ಆನಂದಸ್ವಾಮಿ ಗಡ್ಡದೇವರಮಠ ಅವರನ್ನು ಗೆಲ್ಲಿಸಬೇಕು. ದೇಶದ ಬಡ ಜನರ ಶ್ರೇಯೋಭಿವೃದ್ಧಿಗೆ ಶ್ರಮಿಸುವ ಕಾಂಗ್ರೆಸ್ ಪಕ್ಷ, ಅಲ್ಪಸಂಖ್ಯಾತ ಸಮುದಾಯದೊಂದಿಗೆ ಉತ್ತಮ ಬಾಂಧವ್ಯ ಹೊಂದಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ ಸೇರಿದಂತೆ ಇನ್ನಿತರ ಗ್ಯಾರಂಟಿಗಳನ್ನು ದೇಶದ ಬಡವರಿಗೆ ನೀಡಲಾಗುವುದು’ ಎಂದು ಭರವಸೆ ನೀಡಿದರು.

ಹಾವೇರಿಯನ್ನು ಬಸವರಾಜ ಬೊಮ್ಮಾಯಿ ಅಭಿವೃದ್ಧಿಪಡಿಸಿದ್ದಾರೆಯೇ ಎಂದು ಪ್ರಶ್ನಿಸಿದ ಶಿವಣ್ಣನವರ, ಅವರ ಸಾಧನೆಯನ್ನುಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು.

ಕಾಂಗ್ರೆಸ್‌ ಜಿಲ್ಲಾ ಘಟಕದ ಉಪಾಧ್ಯಕ್ಷ ಡಾ.ಎ.ಎಂ.ಸೌದಾಗರ, ರಾಜೇಸಾಬ ಕಳ್ಳಾಳ, ಮುಕ್ತಿಯಾರ ಮುಲ್ಲಾ, ನಜೀರ್‌ಅಹ್ಮದ್ ಶೇಖ್, ಮಂಜೂರ ಹಕೀಂ, ರಾಜಾಭಕ್ಷ ಕೂರಗುಂದ, ಖಾದರಸಾಬ್ ದೊಡ್ಮನಿ ಸೇರಿದಂತೆ ಅನೇಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT