ಹಾವೇರಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಘಟಕದ ಅಧ್ಯಕ್ಷ ರಾಜೇಸಾಬ್ ತರ್ಲಘಟ್ಟ ಮೇಲೆ ದೇವಗಿರಿ ಗ್ರಾಮ ಪಂಚಾಯ್ತಿ ಸದಸ್ಯರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಘಟಕದ ವತಿಯಿಂದ ಗುರುವಾರ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ರೈತರು ಪ್ರತಿಭಟನೆ ನಡೆಸಿದರು.

ಸಂಘದ ರಾಜ್ಯ ಕಾರ್ಯದರ್ಶಿ ಮಾಲತೇಶ್ ಪೂಜಾರ ಮಾತನಾಡಿ, ನೆರೆ ಸಂದರ್ಭದಲ್ಲಿ ಮನೆ ಕಳೆದುಕೊಂಡವರಿಗೆ ಸರ್ಕಾರ ಘೋಷಿಸಿದ ಪರಿಹಾರದಲ್ಲಿ ಅನ್ಯಾಯ ಹಾಗೂ ಅವ್ಯವಹಾರವಾಗಿರುವುದಕ್ಕೆ ಸಂತ್ರಸ್ತರು ಪ್ರತಿಭಟನೆ ನಡೆಸಿದ್ದರು. ಇದನ್ನು ಬೆಳಕಿಗೆ ತಂದು ನ್ಯಾಯಕ್ಕಾಗಿ ಹೋರಾಟ ನಡೆಸಿರುವುದಕ್ಕೆ ರಾಜೇಸಾಬ್ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದರು.

ಸದಸ್ಯರು ಅಧಿಕಾರ ದುರುಪಯೋಗ ಪಡಿಸಿಕೊಂಡು ಪರಿಹಾರವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ದೂರಿದರು. ಹಲ್ಲೆಗೊಳಗಾದ ರಾಜೇಸಾಬ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತಪ್ಪ ಹುಚ್ಚಣ್ಣನವರ, ಹಾಶೀಂ ಜಿಗಳೂರ, ದೀಪಕ ಗಂಟಿಸಿದ್ದಪ್ಪನವರ, ರುದ್ರಪ್ಪ ಬಳಿಗಾರ, ಸುರೇಶ ಚಲವಾದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.