ಭಾನುವಾರ, ಜನವರಿ 17, 2021
20 °C

ಕೃಷಿ ಸಚಿವರ ಹೇಳಿಕೆಗೆ ರೈತಸಂಘ ಖಂಡನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ‘ಆತ್ಮಹತ್ಯೆಗೆ ಶರಣಾಗುವ ರೈತರು ಹೇಡಿಗಳು’ ಎಂದು ನಾಡಿಗೆ ಅನ್ನ ನೀಡುವ ಅನ್ನದಾತರ ಬಗ್ಗೆ ಹಗುರವಾಗಿ ಮಾತನಾಡಿರುವ ಕೃಷಿ ಸಚಿವ ಬಿ.ಸಿ.ಪಾಟೀಲ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಆರ್‌.ವಿ. ಕೆಂಚಳ್ಳೇರ ತಿಳಿಸಿದ್ದಾರೆ. 

ಅತಿವೃಷ್ಟಿ, ಬರಗಾಲ, ಬೆಳೆನಷ್ಟ, ದರ ಕುಸಿತ, ವಿದ್ಯುತ್‌ ಸಮಸ್ಯೆ ಮುಂತಾದ ಕಾರಣಗಳಿಂದ ರೈತರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಹಾಕಿದ ಬಂಡವಾಳವೂ ಕೈ ಸೇರದೆ ಹತಾಶ ಸ್ಥಿತಿ ತಲುಪಿ, ಸಾಲ ತೀರಿಸಲು ಸಾಧ್ಯವಾಗದೆ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಈಗಾಗಲೇ ದೇಶದಲ್ಲಿ 7 ಲಕ್ಷ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ಆತ್ಮಹತ್ಯೆ ಅಲ್ಲ, ಸರ್ಕಾರ ಮಾಡಿದ ಕೊಲೆ ಎಂದು ಟೀಕಿಸಿದ್ದಾರೆ. 

ಹಾವೇರಿ ಜಿಲ್ಲೆಯಲ್ಲಿ ಮೆಕ್ಕೆಜೋಳದ ಬೆಲೆ ಪಾತಾಳಕ್ಕೆ ಕುಸಿದಿದೆ. ಹತ್ತಿ ಬೆಳೆದ ರೈತರು ಬೀದಿಪಾಲಾಗಿದ್ದಾರೆ. ಕೃಷಿ ಪರಿಕರಗಳ ಬೆಲೆಗಳು ಗಗನಕ್ಕೇರಿವೆ. ಜಿಲ್ಲೆಯಲ್ಲಿ ಇಬ್ಬರು ಸಚಿವರಿದ್ದರೂ ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಲು ಸಾಧ್ಯವಾಗಿಲ್ಲ. ರೈತರ ಸಮಸ್ಯೆಗಳಿಗೆ ಪರಿಹಾರ ನೀಡುವ ಬದಲು, ಅನ್ನದಾತರ ಬಗ್ಗೆ ಕೃಷಿ ಸಚಿವರು ಹಗುರವಾಗಿ ಮಾತನಾಡಿದ್ದಾರೆ. ದುಡಿಯುವ ರೈತನನ್ನು ಹೇಡಿ ಎಂದು ಕರೆದಿರುವುದು ಅವರ ವ್ಯಕ್ತಿತ್ವಕ್ಕೆ ಶೋಭೆಯಲ್ಲ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.   

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು