ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಬೀದಿನಾಟಕ ಕಲಾ ತಂಡಗಳ ಒಕ್ಕೂಟದಿಂದ ಮನವಿ

Last Updated 16 ಸೆಪ್ಟೆಂಬರ್ 2020, 4:55 IST
ಅಕ್ಷರ ಗಾತ್ರ

ಹಾವೇರಿ: ಜನ ಜಾಗೃತಿ ಜೊತೆಗೆ ಅಭಿನಯದ ಮೂಲಕ ಬದುಕು ಕಟ್ಟಿಕೊಂಡಿರುವ ಬೀದಿ ನಾಟಕ ಕಲಾವಿದರು ಕಾರ್ಯಕ್ರಮಗಳಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಖ್ಯಮಂತ್ರಿಗಳು ಕಲಾವಿದರ ನೆರವಿಗೆ ಧಾವಿಸಬೇಕು ಎಂದು ರಾಜ್ಯ ಬೀದಿನಾಟಕ ಕಲಾ ತಂಡಗಳ ಒಕ್ಕೂಟದ ಹಾವೇರಿ ಜಿಲ್ಲಾ ಘಟಕದ ಅಧ್ಯಕ್ಷ ಪರಶುರಾಂ ಬಣಕಾರ ಮನವಿ ಮಾಡಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಮೂಲಕ ಬೀದಿ ನಾಟಕ ಕಾರ್ಯಕ್ರಮ ಆರಂಭಿಸುವಂತೆ ಸರ್ಕಾರಕ್ಕೆ ಜಿಲ್ಲಾ ಘಟಕದ ವತಿಯಿಂದ ಮನವಿ ಸಲ್ಲಿಸಿ ಬಳಿಕ ಮಾತನಾಡಿ, ಹಲವು ಇಲಾಖೆಗಳು ₹10-15 ಸಾವಿರಕ್ಕೆ ಬದಲಾಗಿ ₹500-1000ಕ್ಕೆ ಒಂದು ಕಾರ್ಯಕ್ರಮ ಆಯೋಜಿಸುತ್ತಾರೆ. ಇದರಿಂದ ನಮ್ಮ ಹೊಟ್ಟೆ ತುಂಬುದಿವುದಿಲ್ಲ ಎಂದರು.

ಬಳಿಕ ಸಂಘದ ಸಹ ಕಾರ್ಯದರ್ಶಿ ಶಿವಕುಮಾರ ಜಾಧವ ಮಾತನಾಡಿ, ಕಳೆದ 40 ವರ್ಷಗಳಿಂದ ರಾಜ್ಯದ ಸುಮಾರು 4,500 ಜನ ಕಲಾವಿದರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಜಾಗೃತಿ ಕಾರ್ಯಕ್ರಮಗಳು ಸೇರಿದಂತೆ ಸ್ವಚ್ಛತೆ ಜೊತೆಗೆ ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

ಇದರಿಂದಲೇ ಉಸಿರಾಡುವ ಅನೇಕ ಬೀದಿ ನಾಟಕ ಕಲಾವಿದರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಕೋವಿಡ್‌ ಸೋಂಕಿನ ನಡುವೆ ಜೀವನ ಸಾಗಿಸುವುದು ಕಷ್ಟಕರವಾಗಿದೆ ಎಂದು ಅಲವತ್ತುಕೊಂಡರಲ್ಲದೆ ಸರ್ಕಾರ ಬೇಗನೆ ಬದುಕಿಗೆ ಆಸರೆಯಾದ ಬೀದಿ ನಾಟಕ ಆರಂಭಿಸುವಂತೆ ಮನವಿ ಮಾಡಿದರು.

ಕರ್ನಾಟಕ ರಾಜ್ಯ ಬೀದಿನಾಟಕ ಕಲಾತಂಡಗಳ ಒಕ್ಕೂಟ, ಜಿಲ್ಲಾ ಘಟಕದ ಗೌರವಾಧ್ಯಕ್ಷ ಗುರುನಾಥ ಹುಬ್ಬಳ್ಳಿ, ಉಪಾಧ್ಯಕ್ಷ ಲತಾ ಪಾಟೀಲ, ಕಾರ್ಯದರ್ಶಿ ಬಸವರಾಜ ಕರಡಿ, ವೀರಯ್ಯ ಸಂಕಿನಮಠ, ಬಸವರಾಜ ಗೊಬ್ಬಿ, ಗುಡ್ಡಪ್ಪ ಬಾರ್ಕಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT