ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಓಲೇಕಾರರ ಪಕ್ಷ ನಿಷ್ಠೆ ಅನನ್ಯ’

Last Updated 12 ಡಿಸೆಂಬರ್ 2020, 14:14 IST
ಅಕ್ಷರ ಗಾತ್ರ

ಹಾವೇರಿ:ರಾಜ್ಯ ಅನುಸೂಚಿತ ಜಾತಿ ಹಾಗೂ ಬುಡಕಟ್ಟು ಜನಾಂಗದ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ನಗರಕ್ಕೆ ಬಂದ ಶಾಸಕ ನೆಹರು ಓಲೇಕಾರ ಅವರಿಗೆ ಶುಕ್ರವಾರ ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಸನ್ಮಾನಿಸಲಾಯಿತು.

ಬಿಜೆಪಿ ಮುಖಂಡ ಪ್ರೊ.ಮಾ.ನಾಗರಾಜ ಮಾತನಾಡಿ, ‘ಸದ್ಯದ ಸಂಧಿಗ್ಧ ಪರಿಸ್ಥಿತಿಯನ್ನು ಅರಿತು ಪಕ್ಷಕ್ಕೆ ಮುಜುಗರವಾಗದಂತೆ ಸಹನೆಯಿಂದ ವರ್ತಿಸಿದ ಓಲೇಕಾರ ಅವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ’ ಎಂದರು.

ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ ಮಾತನಾಡಿ, ಹಿರಿತನದ ಆಧಾರದ ಮೇಲೆ ಅನಾಯಾಸವಾಗಿ ಸಚಿವರಾಗಬಹುದಿತ್ತು. ಆದರೆ ಜಿಲ್ಲೆಯಲ್ಲಿ ಈಗಾಗಲೇ ಇಬ್ಬರು ಸಚಿವರಿದ್ದು, ಮಾತು ಕೊಟ್ಟಂತೆ ಆರ್. ಶಂಕರ್ ಅವರಿಗೂ ಮಂತ್ರಿ ಮಾಡಲೇಬೇಕಾಗಿದೆ. ಹಾಗಾಗಿ ಅನಿವಾರ್ಯ ಕಾರಣಗಳಿಂದಾಗಿ ಸಚಿವ ಸ್ಥಾನ ಬಿಟ್ಟುಕೊಟ್ಟು, ಪಕ್ಷ ಹಾಗೂ ಮುಖ್ಯಮಂತ್ರಿ ಸೂಚಿಸಿದ ನಿಗಮವನ್ನು ವಹಿಸಿಕೊಂಡಿರುವುದು ಅವರ ಬದ್ಧತೆಗೆ ಹಿಡಿದ ಕೈಗನ್ನಡಿಯಾಗಿದೆ’ ಓಲೇಕಾರ ಅವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು.

ನೆಹರು ಓಲೇಕಾರ ಮಾತನಾಡಿ, ‘ಪಕ್ಷ ಹಾಗೂ ಕ್ಷೇತ್ರದ ಜನರ ಆಶೀರ್ವಾದದ ಫಲವಾಗಿ ಎರಡನೇ ಬಾರಿಗೆ ನಿಗಮದ ಅಧ್ಯಕ್ಷನಾಗುವ ಅವಕಾಶ ಸಿಕ್ಕಿದೆ. ಸರ್ಕಾರದ ಮೇಲೆ ಹಾಗೂ ಮುಖ್ಯಮಂತ್ರಿ ಮೇಲಿರುವ ಸಚಿವ ಆಕಾಂಕ್ಷಿಗಳ ಒತ್ತಡವನ್ನು ಮನಗಂಡು ಆಯೋಗವನ್ನು ಒಪ್ಪಿ ಅಧಿಕಾರ ಸ್ವೀಕಾರ ಮಾಡಿದ್ದೇನೆ’ ಎಂದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರದೀಪ ಮುಳ್ಳೂರ, ಶಶಿಧರ ಹೊಸಳ್ಳಿ, ಪ್ರಾಧಿಕಾರದ ಅಧ್ಯಕ್ಷರಾದ ಶಿವಕುಮಾರ ಸಂಗೂರ, ನಗರ ಮಂಡಲ ಅಧ್ಯಕ್ಷರಾದ ಗಿರೀಶ ತುಪ್ಪದ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT