ಶನಿವಾರ, ಫೆಬ್ರವರಿ 27, 2021
19 °C

ಫೀವರ್‌ ಕ್ಲಿನಿಕ್‌ ಆರಂಭ: ಸಚಿವ ಬಸವರಾಜ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಕೋವಿಡ್– 19 ಪ್ರಕರಣ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಸವಣೂರಿನ ಅಲ್ಪಸಂಖ್ಯಾತರ ವಸತಿ‌ ನಿಲಯದಲ್ಲಿ ‘ಫೀವರ್ ಕ್ಲಿನಿಕ್’ ತೆರೆಯಲಾಗಿದ್ದು, ಪಟ್ಟಣದಲ್ಲಿ ಸಂಪೂರ್ಣ ವ್ಯಾಪಾರ, ವಹಿವಾಟು ಸಂಪೂರ್ಣ ಬಂದ್ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ವ್ಯಕ್ತಿಯಿಂದ ಪ್ರಾಥಮಿಕ ಸಂಪರ್ಕದಲ್ಲಿರುವ 18 ಜನರನ್ನು ಗುರುತಿಸಿದ್ದು, ಹಾಗೂ ದ್ವಿತೀಯ ಸಂಪರ್ಕದಲ್ಲಿರುವ 12 ವ್ಯಕ್ತಿಗಳನ್ನು ಇಲ್ಲಿಯವರೆಗೆ ಗುರುತಿಸಿದ್ದು, ಇವರ ಗಂಟಲು ದ್ರವವನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದು, ವರದಿ ನಿರೀಕ್ಷೆ ಮಾಡಲಾಗುತ್ತಿದೆ. ಇನ್ನುಳಿದವರ ಪತ್ತೆ ಕಾರ್ಯ ಪ್ರಗತಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.

ಸವಣೂರು ತಾಲ್ಲೂಕಿನ ಎಸ್.ಎಂ.ಕೃಷ್ಣ ನಗರದಲ್ಲಿನ 393 ಮನೆಗಳಲ್ಲಿನ 1,729 ಜನರನ್ನು ಗುರುತಿಸಿದ್ದು, ಈ ಪ್ರದೇಶವನ್ನು ಸಂಪೂರ್ಣವಾಗಿ ಸೀಲ್‍ಡೌನ್ ಮಾಡಲಾಗಿದೆ. ಅಲ್ಲಿನ ಜನರಿಗೆ ದಾದಿಯರು ಹಾಗೂ ಆಶಾ ಕಾರ್ಯಕರ್ತೆಯರು ಪ್ರತಿ ದಿನವು ಆರೋಗ್ಯ ತಪಾಸಣೆ ನಡೆಸಲಿದ್ದಾರೆ ಎಂದು ಹೇಳಿದ್ದಾರೆ.

ಸೀಲ್‍ಡೌನ್ ಪ್ರದೇಶದ ಜನರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಹಾಲು, ತರಕಾರಿ, ಹಾಗೂ ದಿನಸಿ ಸಾಮಗ್ರಿಗಳನ್ನು ಜಿಲ್ಲಾಡಳಿತದಿಂದಲೇ ನೀಡಲು ವ್ಯವಸ್ಥೆ ಮಾಡಲಾಗಿದ್ದು, ಸವಣೂರು ಪಟ್ಟಣವನ್ನು ಬಫರ್‌ ಝೋನ್‌ ಎಂದು ಗುರುತಿಸಲಾಗಿದ್ದು, ಸವಣೂರು ನಗರ ಪ್ರದೇಶದಲ್ಲಿ ವ್ಯಾಪಾರ, ವ್ಯವಹಾರ ವಹಿವಾಟುಗಳನ್ನು ನಿರ್ವಹಿಸದಂತೆ ಸೂಚಿಸಲಾಗಿದೆ. ಅಲ್ಲಿಯೇ ಕಂಟ್ರೋಲ್ ರೂಂ ಸಹ ತೆರೆಯಲಾಗಿರುತ್ತದೆ. ಆದ್ದರಿಂದ ಜಿಲ್ಲೆಯ ಜನತೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಮನವರಿಕೆ ಮಾಡಿ ಜಿಲ್ಲಾಡಳಿತಕ್ಕೆ ತೀವ್ರ ಕಟ್ಟುನಿಟ್ಟಿನ ಕ್ರಮವನ್ನು ಜರುಗಿಸಲು ಸೂಚಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು