ಕ್ಷಯರೋಗ ವಿಭಾಗ: ಅಂತಿಮ ಆಯ್ಕೆ ಪಟ್ಟಿ ಪ್ರಕಟ

ಹಾವೇರಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರದ ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಯನ್ನು ಸೋಮವಾರ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.
2020ರ ಸೆ.19ರಂದು ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿ, ಆಕ್ಷೇಪಣೆಗಳಿದ್ದಲ್ಲಿ ಸೆ.25ರ ಒಳಗೆ ಕಚೇರಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ನಂತರ ನಾಲ್ಕು ತಿಂಗಳು ಕಳೆದರೂ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸದ ಕಾರಣ ಆಯ್ಕೆಯಾಗಿದ್ದ ಅಭ್ಯರ್ಥಿಗಳು ಕಂಗಾಲಾಗಿದ್ದರು. ಸಿಕ್ಕ ಕೆಲಸ ಕೈತಪ್ಪುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದರು.
ಈ ಬಗ್ಗೆ ಸವಿವರವಾಗಿ ‘ಪ್ರಜಾವಾಣಿ’ಯಲ್ಲಿ ಜನವರಿ 31ರಂದು ‘4 ತಿಂಗಳಾದರೂ ಸಿಗದ ನೇಮಕಾತಿ ಆದೇಶ’ ಶೀರ್ಷಿಕೆಯಲ್ಲಿ ವಿಶೇಷ ವರದಿ ಪ್ರಕಟವಾಗಿತ್ತು. ವರದಿಗೆ ಸ್ಪಂದಿಸಿದ ಜಿಲ್ಲಾ ಪಂಚಾಯಿತಿ ಸಿಇಒ ಮೊಹಮ್ಮದ್ ರೋಶನ್ ಅವರು ಕೂಡಲೇ ಕ್ರಮ ಕೈಗೊಂಡು, ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.