ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅವ್ಯವಹಾರ: ನಿವೃತ್ತ ಪ್ರಾಂಶುಪಾಲ ಸೇರಿ 6 ಮಂದಿ ವಿರುದ್ಧ ಎಫ್‌ಐಆರ್‌

ಹಾವೇರಿ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಅವ್ಯವಹಾರ ಪ್ರಕರಣ
Last Updated 20 ಜೂನ್ 2022, 19:25 IST
ಅಕ್ಷರ ಗಾತ್ರ

ಹಾವೇರಿ: ತಾಲ್ಲೂಕಿನ ದೇವಗಿರಿ ಸಮೀಪದ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ನಡೆದಿರುವ ಅವ್ಯವಹಾರ ಪ್ರಕರಣದ ಸಂಬಂಧ ನಿವೃತ್ತ ಪ್ರಾಂಶುಪಾಲ ಸೇರಿ 6 ಮಂದಿ ವಿರುದ್ಧ ನಗರದ ಸೈಬರ್‌ ಅಪರಾಧ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್‌ ಪ್ರಕರಣ ದಾಖಲಾಗಿದೆ.

ನಿವೃತ್ತ ಪ್ರಾಂಶು ಪಾಲ ಡಾ.ಕೆ.ಬಿ.ಪ್ರಕಾಶ್, ಕಚೇರಿ ಅಧೀಕ್ಷಕರಾದ ಎಚ್‌.ವಾಸುದೇವ, ಗುರಪ್ಪ ಸುಂಕದವರ, ಪ್ರಥಮದರ್ಜೆ ಸಹಾಯಕಿ ಜಯಮ್ಮ ಕಾಚೇರ, ದ್ವಿತೀಯ ದರ್ಜೆ ಸಹಾಯಕರಾದ ರವೀಂದ್ರಕುಮಾರ ಮತ್ತು ಅನಿಲಕುಮಾರ ಕಟಿಗಾರ ವಿರುದ್ಧ ಕಾಲೇಜಿನ ಹಾಲಿ ಪ್ರಾಂಶು ಪಾಲ ಡಾ.ಜಗದೀಶ ಕೋರಿ ದೂರು ನೀಡಿದ್ದಾರೆ.

‘2007 ಅ.1ರಿಂದ 2022 ಏಪ್ರಿಲ್‌ 30ರ ಅವಧಿಯಲ್ಲಿ ಅಧಿಕಾರ ದುರ್ಬಳಕೆ ಮಾಡಿ ಕೊಂಡು, ಕಾಲೇಜಿನ ಸರ್ಕಾರಿ ದಾಖಲೆಗಳನ್ನು ತಿದ್ದುಪಡಿ ಮಾಡಿದ್ದಾರೆ. ಪ್ರವೇಶ ಶುಲ್ಕ, ಪರೀಕ್ಷಾ ಶುಲ್ಕ, ಸಿಸಿಟೆಕ್‌, ಸ್ಕಾಲರ್‌ಶಿಪ್‌, ವಿದ್ಯಾರ್ಥಿ ಶೈಕ್ಷಣಿಕ ಸಾಲದ ಹಣ ಸೇರಿ ದಂತೆ ಒಟ್ಟು ₹ 3.14 ಕೋಟಿಯನ್ನು ದುರುಪಯೋಗಪಡಿಸಿಕೊಂಡು ಸರ್ಕಾರಕ್ಕೆ ಮೋಸ ಮಾಡಿದ್ದಾರೆ’ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಅವ್ಯವಹಾರ ಕುರಿತು
‘ವಿದ್ಯಾಸಿರಿ ಸ್ಕಾಲರ್‌ಶಿಪ್‌ಗೆ ಕನ್ನ!’ ಶೀರ್ಷಿಕೆ ಯಡಿ ‘ಪ್ರಜಾವಾಣಿ’ಯಲ್ಲಿ ವರದಿ ಪ್ರಕಟವಾದ ನಂತರ ತಾಂತ್ರಿಕ ಶಿಕ್ಷಣ ಇಲಾಖೆ ಐವರು ಸರ್ಕಾರಿ ನೌಕರರನ್ನು ಅಮಾನತು ಮಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT