ಗುರುವಾರ , ಮೇ 13, 2021
39 °C

ಬೆಂಕಿ ಅವಘಡ: ಯಂತ್ರೋಪಕರಣ ಭಸ್ಮ‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಇಲ್ಲಿನ ಎಪಿಎಂಸಿ ರಸ್ತೆಗೆ ಹೊಂದಿಕೊಂಡಿರುವ ವುಡ್‌ ಪ್ಲೇನಿಂಗ್‌ ಮಿಲ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಕಟ್ಟಿಗೆ ಹಾಗೂ ಯಂತ್ರೋಪಕರಣಗಳು ಸಂಪೂರ್ಣವಾಗಿ ಸುಟ್ಟಿರುವ ಘಟನೆ ಮಂಗಳವಾರ ನಡೆದಿದೆ.

ಈ ಪ್ಲೇನಿಂಗ್‌ ಮಿಲ್‌ ಬಸವರಾಜ ಬಣಕಾರ ಎಂಬುವರಿಗೆ ಸೇರಿದೆ. ಯುಗಾದಿ ಹಬ್ಬದ ಅಂಗವಾಗಿ ಮಂಗಳವಾರ ಮಿಲ್‌ ಅನ್ನು ತೆರೆದಿರಲಿಲ್ಲ. ಬೆಳಿಗ್ಗೆ 11ರ ಸುಮಾರಿಗೆ ಬೆಂಕಿ ತಗುಲಿ ಅಕ್ಕ-ಪಕ್ಕದ ಮನೆಗಳಿಗೂ ಬೆಂಕಿ ಆವರಿಸಿದೆ. ಇದನ್ನು ಗಮನಿಸಿದ ಸಾರ್ವಜನಿಕರು ಅಗ್ನಿಶಾಮಕ ಠಾಣೆಗೆ ದೂರು ನೀಡಿದ್ದಾರೆ. 

ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಅವಘಡದಲ್ಲಿ ₹10 ಲಕ್ಷಕ್ಕೂ ಅಧಿಕ ಮೌಲ್ಯದ ಕಟ್ಟಿಗೆ ಹಾಗೂ ಯಂತ್ರೋಪಕರಣಗಳು ಸುಟ್ಟಿವೆ ಎಂದು ಅಂದಾಜಿಸಲಾಗಿದೆ. ವಿದ್ಯತ್ ಶಾರ್ಟ್‌ ಸರ್ಕಿಟ್‌ನಿಂದ ಬೆಂಕಿ ತಗುಲಿರಬಹುದು ಎನ್ನಲಾಗುತ್ತಿದೆ. ಹಾವೇರಿ ಶಹರ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.