ಮಂಗಳವಾರ, ಆಗಸ್ಟ್ 3, 2021
27 °C

ಹಾವೇರಿಯಲ್ಲಿ ಬೆಂಕಿ ಅವಘಡ: ಟಿ.ವಿ, ಫ್ರಿಡ್ಜ್‌ ನಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಆಕಸ್ಮಿಕ ಬೆಂಕಿ ಅವಘಡದಿಂದ ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಇಲ್ಲಿನ ಅಂಬೇಡ್ಕರ್ ನಗರದಲ್ಲಿ ಶನಿವಾರ ನಡೆದಿದೆ.

ಅಂಬೇಡ್ಕರ್ ನಗರದ ರತ್ನವ್ವ ಗಾಳೆಪ್ಪನವರ ಎಂಬುವರ ಮನೆಯಲ್ಲಿ ಬೆಂಕಿ ಅವಘಡ ನಡೆದಿದೆ. ಟಿ.ವಿ. ಪ್ರಿಡ್ಜ್, ಕ್ಯಾಮೆರಾ ಲೆನ್ಸ್, ಮಂಚ, ಬಟ್ಟೆಗಳು ಸೇರಿದಂತೆ ಸುಮಾರು ₹8 ಲಕ್ಷಕ್ಕೂ ಅಧಿಕ ಮೊತ್ತದ ವಸ್ತುಗಳು ಬೆಂಕಿಯಲ್ಲಿ ಬೆಂದು ಹೋಗಿವೆ.

ಬೆಂಕಿ ಅವಘಡ ಸಂಭವಿಸಿದ ಸಮಯದಲ್ಲಿ ಮನೆಯಲ್ಲಿ ಯಾರೂ ಇರಲಿಲ್ಲ. ಸ್ಥಳಕ್ಕೆ ಆಗಮಿಸಿದ‌ ಹಾವೇರಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ‌ ನಂದಿಸಿ, ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು