ಗುರುವಾರ , ಅಕ್ಟೋಬರ್ 28, 2021
19 °C

ಹಾವೇರಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ: ಪಾರಾದ ತಾಯಂದಿರು, ನವಜಾತ ಶಿಶುಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಆಸ್ಪತ್ರೆಯ ಹೊರಗಡೆ ಕುಳಿತಿರುವ ಬಾಣಂತಿಯರು ಹಾಗೂ ಪುಟ್ಟ ಕಂದಮ್ಮಗಳನ್ನು ಲಾಲಿಸುತ್ತಿರುವ ಮಹಿಳೆ

ಹಾವೇರಿ: ರಾಣೆಬೆನ್ನೂರಿನ ಬೆಂಕಿ ಅವಘಡ ಘಟನೆಯ ಬೆನ್ನಲ್ಲೇ, ಹಾವೇರಿ ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಮಂಗಳವಾರ ಬೆಳಿಗ್ಗೆ 7.30ರ ಸಮಯದಲ್ಲಿ ಬೆಂಕಿ ಮತ್ತು ಹೊಗೆ ಕಾಣಿಸಿಕೊಂಡು, ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಯಿತು. 

ಆಸ್ಪತ್ರೆಯಲ್ಲಿ ಹೊಗೆ ಆವರಿಸಿದ ತಕ್ಷಣ, ಗರ್ಭಿಣಿ ಹಾಗೂ ಬಾಣಂತಿಯರು ತಮ್ಮ ಪುಟ್ಟ ಕಂದಮ್ಮಗಳನ್ನು ಎದೆಗವಚಿಕೊಂಡು ಆತಂಕದಿಂದ ಹೊರಗಡೆ ಓಡಿ ಬಂದರು. ಆಸ್ಪತ್ರೆ ಸಿಬ್ಬಂದಿ ಕಿಟಕಿ, ಬಾಗಿಲುಗಳನ್ನು ತೆರೆದು ಹೊರಗಡೆ ದೌಡಾಯಿಸಿದರು.

ಎಲೆಕ್ಟ್ರಿಕಲ್‌ ಎಂಸಿಬಿ ಬೋರ್ಡ್‌ನಲ್ಲಿ ಲೋಡ್‌ ಜಾಸ್ತಿಯಾಗಿ, ವಿದ್ಯುತ್‌ ಉಪಕರಣ ಸುಟ್ಟು ಹೋಯಿತು. ಇದರ ಪರಿಣಾಮ ಬೆಂಕಿ ಮತ್ತು ಹೊಗೆ ಕಾಣಿಸಿಕೊಂಡಿತು. ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿ, ದೊಡ್ಡ ಅನಾಹುತವನ್ನು ತಪ್ಪಿಸಿದರು. 

‘ಆಸ್ಪತ್ರೆಯಲ್ಲಿದ್ದ ಸುಮಾರು 50 ಗರ್ಭಿಣಿ, ಬಾಣಂತಿಯರು ಹಾಗೂ ನವಜಾತ ಶಿಶುಗಳನ್ನು ಮತ್ತೊಂದು ಕಟ್ಟಡಕ್ಕೆ ಸ್ಥಳಾಂತರ ಮಾಡಿದ್ದೇವೆ. ಹೆರಿಗೆ ವಿಭಾಗ ಮತ್ತು ಆಪರೇಷನ್‌ ಥಿಯೇಟರ್‌ ಅನ್ನು ತಾತ್ಕಾಲಿಕವಾಗಿ ಮುಖ್ಯ ಕಟ್ಟಡಕ್ಕೆ ಸ್ಥಳಾಂತರ ಮಾಡುತ್ತೇವೆ. ಆಸ್ಪತ್ರೆ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ’ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಪಿ.ಆರ್‌. ಹಾವನೂರ ‘ಪ್ರಜಾವಾಣಿ’ಗೆ ತಿಳಿಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು