ಸೋಮವಾರ, ನವೆಂಬರ್ 30, 2020
20 °C

ಬೆಂಕಿ ಅವಘಡ: ತೊಗರಿ ಬೆಳೆ ಭಸ್ಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ತಾಲೂಕಿನ ಕನವಳ್ಳಿ ಗ್ರಾಮದ ಹೊರವೊಲಯದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಐದು ಎಕರೆಯಲ್ಲಿ ಬೆಳೆಯಲಾಗಿದ್ದ ಮೆಕ್ಕೆಜೋಳ ಮತ್ತು ತೊಗರಿಬೆಳೆ ಸುಟ್ಟು ಕರಕಲಾಗಿವೆ. 

ಖ್ವಾಜಾಮೊಹಿದ್ದೀನ್‌ ಕದರಮಂಡಲಗಿ ಎನ್ನುವ ರೈತ ತನ್ನ ಐದು ಎಕರೆ ಜಮೀನಿನಲ್ಲಿ ಬೆಳೆದಿದ್ದ ಅಂದಾಜು 8 ಟ್ಯಾಕ್ಟರ್‌ನಷ್ಟು ಗೋವಿನಜೋಳ ಹಾಗೂ ತೊಗರಿ ಬೆಳೆ ಆಕಸ್ಮಿಕ ಬೆಂಕಿ ಅವಘಡಲ್ಲಿ ಸಂಪೂರ್ಣ ಸುಟ್ಟು ಹೋಗಿದೆ. ವಿಷಯ ತಿಳಿದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ತಕ್ಷಣ ಧಾವಿಸಿ, ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಿದರು. 

ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ರೈತನಿಗೆ ಸೂಕ್ತ ಪರಿಹಾರ ನೀಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಮುಖಂಡ ಮಂಜುನಾಥ ಕದಂ ಆಗ್ರಹಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.