ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾರ್ಟ್‌ ಸರ್ಕಿಟ್‌: ಕಬ್ಬು ಬೆಂಕಿಗಾಹುತಿ

Last Updated 1 ಡಿಸೆಂಬರ್ 2020, 16:05 IST
ಅಕ್ಷರ ಗಾತ್ರ

ಹಾವೇರಿ:ತಾಲ್ಲೂಕಿನ ವೆಂಕಟಾಪುರ ಗ್ರಾಮದ ಬಳಿ ಮಂಗಳವಾರ ವಿದ್ಯುತ್‌ ಶಾರ್ಟ್‌ ಸರ್ಕಿಟ್‌ನಿಂದ ಕಬ್ಬಿನ ಜಮೀನಿಗೆ ಬೆಂಕಿ ಬಿದ್ದಿದ್ದು, ಬೆಂಕಿ ನಂದಿಸಲು ರೈತರು ಹರಸಾಹಸಪಟ್ಟರು.

ಸುಭಾನಲಿ ಮೆಳ್ಳಾಗಟ್ಟಿ ಎಂಬುವವರಿಗೆ ಸೇರಿದ ಜಮೀನು ಇದಾಗಿದೆ. ಮೂರು ಎಕರೆಯಲ್ಲಿ ಫಲವತ್ತಾಗಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿದ್ದು, ₹4 ಲಕ್ಷ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಇದೀಗ ಬೆಳೆ ಕಳೆದುಕೊಂಡ ರೈತ ಕಣ್ಣೀರಲ್ಲಿ ಕೈ ತೊಳೆಯುವಂತಾಗಿದ್ದು, ಸೂಕ್ತ ಪರಿಹಾರಕ್ಕೆ ಆಗ್ರಹಿಸಿದ್ದಾರೆ.

ವಿದ್ಯುತ್ ತಂತಿಗಳಿಂದ ಈ ಅವಘಡ ನಡೆದಿದ್ದು, ಹೆಸ್ಕಾ ಅಧಿಕಾರಿಗಳ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

5 ಎಕರೆ ಕಬ್ಬು ನಾಶ:

ಹಾವೇರಿ ತಾಲ್ಲೂಕಿನ ಗೌರಾಪುರ ಗ್ರಾಮದ ಹೊರವಲಯದಲ್ಲಿ ಸೋಮವಾರ ಅಗ್ನಿಸ್ಪರ್ಶದಿಂದ 5 ಎಕರೆ ಕಬ್ಬು ನಾಶವಾಗಿದೆ.

ಮಾಲತೇಶ ಎಂಬುವರಿಗೆ ಈ ಜಮೀನು ಸಂಬಂಧಪಟ್ಟಿದೆ. ಬೋರ್‌ವೆಲ್‌ ಮೋಟಾರ್‌ನಿಂದ ಉಂಟಾದ ಕಿಡಿ ಕಬ್ಬಿನ ಗದ್ದೆಗೆ ತಗುಲಿ ಅವಘಡ ಸಂಭವಿಸಿದೆ. ವಿಷಯ ತಿಳಿದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದರು.

ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ಕೊಡಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT