ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತಿ ಧ್ವಜಕ್ಕೆ ₹22 ನಿಗದಿ: ಜಿಲ್ಲಾಧಿಕಾರಿ

ಆ.13ರಿಂದ 15ರವರೆಗೆ ಮನೆ–ಮನೆಯಲ್ಲೂ ತ್ರಿವರ್ಣ ಧ್ವಜ ಹಾರಿಸಿ
Last Updated 10 ಆಗಸ್ಟ್ 2022, 14:18 IST
ಅಕ್ಷರ ಗಾತ್ರ

ಹಾವೇರಿ: ಕೇಂದ್ರ ಸರ್ಕಾರದ ನಿರ್ದೇಶನದಂತೆ 75ನೇ ವರ್ಷದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ‘ಹರ್ ಘರ್ ತಿರಂಗಾ’ ಅಭಿಯಾನದ ಮೂಲಕ ಆ.13 ರಿಂದ 15ರವರೆಗೆ ಮೂರು ದಿನಗಳ ಕಾಲ ಜಿಲ್ಲೆಯ ಎಲ್ಲ ಕಚೇರಿಗಳು ಹಾಗೂ ಪ್ರತಿ ಮನೆ ಮನೆಯಲ್ಲೂ ತ್ರಿವರ್ಣ ರಾಷ್ಟ್ರ ಧ್ವಜವನ್ನು ಹಾರಿಸಬೇಕು.

ಸಾರ್ವಜನಿಕರಿಗೆ ರಾಷ್ಟ್ರಧ್ವಜ ಖರೀದಿಗೆ ಅನುಕೂಲವಾಗಲು ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಮತ್ತು ಹಾವೇರಿ ನಗರದ ಜಿಲ್ಲಾ ಗುರುಭವನದಲ್ಲಿ ರಾಷ್ಟ್ರ ಧ್ವಜಗಳ ಮಾರಾಟ ವ್ಯವಸ್ಥೆ ಮಾಡಲಾಗಿದೆ.

ಸಾರ್ವಜನಿಕರು ಪ್ರತಿ ಒಂದು ಧ್ವಜಕ್ಕೆ ₹22 ರಂತೆ ಸಂದಾಯ ಮಾಡಿ ಖರೀದಿಸಿ ತಮ್ಮ ಮನೆಗಳ ಮೇಲೆ ಧ್ವಜಗಳನ್ನು ಹಾರಿಸುವುದರ ಮೂಲಕ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಜಿಲ್ಲೆಯ ಎಲ್ಲ ಶಾಲೆ, ಕಾಲೇಜು, ಸರ್ಕಾರಿ ಕಚೇರಿ ಕಟ್ಟಡ, ಅಂಗನವಾಡಿ, ಪಂಚಾಯಿತಿ ಕಟ್ಟಡಗಳಲ್ಲಿ ಆ.13ರಿಂದ ಆ.15ರವರೆಗೆ ಪ್ರತಿ ದಿನ ಬೆಳಿಗ್ಗೆ 8 ಗಂಟೆಗೆ ಧ್ವಜಾರೋಹಣ ಮಾಡುವುದು, ಸಂಜೆ ಸೂರ್ಯಾಸ್ತಕ್ಕೆ ಇಳಿಸಬೇಕು ಎಂದು ಪ್ರಕಟಣೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT