ಮಂಗಳವಾರ, ಜನವರಿ 31, 2023
27 °C

ಜಾನಪದ ವಿವಿ ಘಟಿಕೋತ್ಸವ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಆವರಣದಲ್ಲಿರುವ ‘ಹಿರೇತಿಟ್ಟು’ ಬಯಲು ರಂಗಮಂದಿರದಲ್ಲಿ ಡಿ. 1ರಂದು 6 ಮತ್ತು 7ನೇ ಘಟಿಕೋತ್ಸವ ನಡೆಯಲಿದೆ. 

ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್‌ ಪದವಿ ಪ್ರದಾನ ಮಾಡಲಿದ್ದಾರೆ. ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್‌ ಆಳ್ವ ‘ಘಟಿಕೋತ್ಸವ ಭಾಷಣ’ ಮಾಡಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ಮತ್ತು ಕುಲಪತಿ ಪ್ರೊ.ಟಿ.ಎಂ.ಭಾಸ್ಕರ್‌ ಉಪಸ್ಥಿತರಿರಲಿದ್ದಾರೆ. 

ಆರು ಸಾಧಕರಿಗೆ ಗೌರವ ಡಾಕ್ಟರೇಟ್‌:

ರಾಣೆಬೆನ್ನೂರಿನ ಅರೆಮಲ್ಲಾಪುರದ ಜಾನಪದ ಕಲಾವಿದ ಕೆಂಚಪ್ಪ ನಾಗರಜ್ಜಿ, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಜೀವನ್‌ ರಾಂ ಸುಳ್ಯ, ಉಡುಪಿ ಜಿಲ್ಲೆಯ ಯಕ್ಷಗಾನ ಕಲಾವಿದ ತಲ್ಲೂರು ಶಿವರಾಮ ಶೆಟ್ಟಿ, ಹುಬ್ಬಳ್ಳಿಯ ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ, ಗದಗ ಜಿಲ್ಲೆಯ ಗಂಗಿಮಡಿನಗರದ ಬಸವರಾಜು ಕಂಚಿಗೇರಿ, ಬಾಗಲಕೋಟೆ ಜಿಲ್ಲೆಯ ವೆಂಕಪ್ಪ ಅಂಬಾಜಿ ಸುಗೇತಕರ್‌ ಈ ಆರು ಸಾಧಕರಿಗೆ ಜಾನಪದ ವಿವಿಯಿಂ ಗೌರವ ಡಾಕ್ಟರೇಟ್‌ ಪದವಿ ಪ್ರದಾನ ಮಾಡಲಾಗುವುದು ಎಂದು ಕುಲಪತಿ ಪ್ರೊ.ಟಿ.ಎಂ. ಭಾಸ್ಕರ್‌ ತಿಳಿಸಿದ್ದಾರೆ. 

ಚಿನ್ನದ ಪದಕ ಪಡೆದ 3 ವಿದ್ಯಾರ್ಥಿಗಳು, 26 ರ‍್ಯಾಂಕ್‌ ವಿದ್ಯಾರ್ಥಿಗಳು, ಪಿಎಚ್‌ಡಿ ಪದವಿ ಪಡೆದ 7 ಮಂದಿ ಸೇರಿದಂತೆ ಒಟ್ಟು 515 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು ಎಂದು ಮಾಹಿತಿ ನೀಡಿದರು.  

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು