ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಣ್ಣು ಭ್ರೂಣ ಹತ್ಯೆಗೆ ಕಡಿವಾಣ ಅಗತ್ಯ

ಸಾಮರ್ಥ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ: ಪರಶುರಾಮ ವೈ.ಶೆಟ್ಟೆಪ್ಪನವರ ಅಭಿಮತ
Last Updated 7 ನವೆಂಬರ್ 2020, 14:38 IST
ಅಕ್ಷರ ಗಾತ್ರ

ಹಾವೇರಿ: ಹೆಣ್ಣು ಮಗುವಿನ ರಕ್ಷಣೆ ಬಗ್ಗೆ ಕಾನೂನಿನ ಅರಿವು ಎಲ್ಲಾ ಮಹಿಳೆಯರಿಗೆ ಅಗತ್ಯವಾಗಿದೆ. ವೇದಗಳ ಕಾಲದಿಂದಲೂ ಹೆಣ್ಣನ್ನು ಗೌರವ ಹಾಗೂ ಪೂಜ್ಯನೀಯ ಭಾವನೆಗಳಿಂದ ನೋಡಲಾಗುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಮಹಿಳೆ ಮತ್ತು ಮಕ್ಕಳ ಮೇಲೆ ಶೋಷಣೆ ನಡೆಯುತ್ತಿರುವುದು ದುರ್ದೈವದ ಸಂಗತಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪರಶುರಾಮ ವೈ. ಶೆಟ್ಟಪ್ಪನವರ ಹೇಳಿದರು.

ಬೆಂಗಳೂರು ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ನಗರದ ಜಿಲ್ಲಾ ಬಾಲಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಹಾವೇರಿ ಹೋಬಳಿ ಮಟ್ಟದ ಅಂಗನವಾಡಿ ಕಾರ್ಯಕರ್ತೆಯರಿಗೆ ‘ಪೊಕ್ಸೋ ಕಾಯ್ದೆ-2012 ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ-2006’ ಕುರಿತು ಒಂದು ದಿನದ ಸಾಮರ್ಥ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಸವ ಪೂರ್ವ ಲಿಂಗ ಪತ್ತೆ ಅಪರಾಧವಾಗಿದೆ. ಹೆಣ್ಣು ಭ್ರೂಣಹತ್ಯೆಗೆ ಸಮಾಜ ಕಡಿವಾಣ ಹಾಕದಿದ್ದಲ್ಲಿ ಮುಂದೊಂದು ದಿನ ಹೆಣ್ಣಿಗಾಗಿ ಗಂಡು ಪರದಾಡುವ ಸ್ಥಿತಿ ನಿರ್ಮಾಣವಾಗಬಹುದು. ಹೆಣ್ಣು ಮಗುವನ್ನು ರಕ್ಷಣೆ ಮಾಡುವುದು ಸಮಾಜದ ಪ್ರತಿಯೊಬ್ಬ ಪ್ರಜೆಯ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಲ್ಲಿಕಾರ್ಜುನ ಮಠದ ಮಾತನಾಡಿ, ಹೆಣ್ಣು ಮಕ್ಕಳ ರಕ್ಷಣೆಗಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ವಿವಿಧ ಇಲಾಖೆಗಳು 24x7 ಅವಧಿ ಕಾರ್ಯನಿರ್ವಹಿಸಲು ಸಿದ್ಧವಾಗಿವೆ ಎಂದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೈಲಾ ಜಿ.ಕೆ. ಅವರು ‘ಪೊಕ್ಸೋ ಕಾಯ್ದೆ-2012 ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ-2006’ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಎಸ್.ಎಚ್.ಮಜೀದ್, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ಮುತ್ತುರಾಜ ಮಾದರ, ಹಾಗೂ ಕಾನೂನು ಪರಿವೀಕ್ಷಣಾಧಿಕಾರಿ ಎಂ.ಬಿ. ಬಸವನಾಯಕರ ಮಾತನಾಡಿದರು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ (ಅಸಾಂಸ್ಥಿಕ) ವಿನಯ ಗುಡಗೂರ, ಅಂಗನವಾಡಿ ಮೇಲ್ವಿಚಾರಕಿಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT