ಶನಿವಾರ, ಫೆಬ್ರವರಿ 4, 2023
21 °C

ಸಂಗೀತ ಶಿಕ್ಷಕರ ನೇಮಕಾತಿಗೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಸರ್ಕಾರ ಎಲ್ಲಾ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುತ್ತಿದ್ದು, ಸಂಗೀತ ಶಿಕ್ಷಕರ ಹುದ್ದೆಗಳನ್ನು ಮಾತ್ರ ತುಂಬುತ್ತಿಲ್ಲ, ಇದರಿಂದ ಸಂಗೀತ ಶಿಕ್ಷಣ ಪಡೆದಿರುವ ಪದವೀಧರರಿಗೆ ಅನ್ಯಾಯವಾಗುತ್ತಿದೆ. ಕಾರಣ ಕೂಡಲೇ ಸಂಗೀತ ಶಿಕ್ಷಕರ ನೇಮಕಾತಿಗೆ ಕ್ರಮಕೈಗೊಳ್ಳಬೇಕು ಎಂದು ನವ ಕರ್ನಾಟಕ ಸಂಗೀತ ಪದವೀಧರರ ಸಂಘದ ರಾಜ್ಯಾಧ್ಯಕ್ಷ ಬಂಡಯ್ಯ ಸುಂಟನೂರ ಒತ್ತಾಯಿಸಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸುಮಾರು 12 ವರ್ಷಗಳಿಂದ ಸಂಗೀತ ಶಿಕ್ಷಕರ ಹುದ್ದೆಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ, ಪ್ರೌಢಶಾಲೆಗಳಲ್ಲಿ, ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳಲ್ಲಿ ಸಂಗೀತ ಶಿಕ್ಷಕರ ನೇಮಕಾತಿ ನಡೆದಿಲ್ಲ, ರಾಜ್ಯದಲ್ಲಿ ಪ್ರಾಥಮಿಕ ಶಾಲೆಗಳಲ್ಲಿ 259, ಪ್ರೌಢಶಾಲೆಗಳಲ್ಲಿ 763, ವಿವಿಧ ವಸತಿ ಶಾಲೆಗಳಲ್ಲಿ ಖಾಲಿ ಇರುವ 793 ಹುದ್ದೆಗಳ ಭರ್ತಿಗೆ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾರ್ಯದರ್ಶಿ ಸುರೇಶ ಪಾಟೀಲ, ಬಸವರಾಜ ಬಣಕಾರ, ಮಂಜಯ್ಯ ಹಿರೇಮಠ, ಜಗದೀಶ ಮಧ್ಯಾಹ್ನದ, ಮಲ್ಲೇಶ ಕಾಡಪ್ಪನವರ ಇದ್ದರು. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು