ಶುಕ್ರವಾರ, ಜೂನ್ 25, 2021
30 °C

ಕಾರ್ಮಿಕರ ಸಂಕಷ್ಟಕ್ಕೆ ಸ್ಪಂದಿಸಲು ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಲಾಕ್‌ಡೌನ್‌ ಜಾರಿಯಿಂದ ಹಲವಾರು ಕಾರ್ಖಾನೆಗಳು ಮುಚ್ಚಿದ್ದು, ಕಾರ್ಮಿಕರ ಬದುಕು ಸಂಕಷ್ಟದಲ್ಲಿದೆ. ಹೀಗಾಗಿ ಕಾರ್ಮಿಕರಿಗೆ ಸಂಬಳ ಸಹಿತ ರಜೆ ನೀಡುವಂತೆ ಕಾರ್ಮಿಕ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸೈನಿಕ ಮತ್ತು ಸಮಾಜ ಸೇವಕ ಎಂ.ಡಿ.ಚಿಕ್ಕಣ್ಣನವರ ಒತ್ತಾಯಿಸಿದ್ದಾರೆ.  

ಸಣ್ಣ ವ್ಯಾಪಾರಿಗಳು, ಆಟೊ, ಟ್ಯಾಕ್ಸಿ ಚಾಲಕರು ವಾಹನಗಳನ್ನು ಖರೀದಿಸಲು ಬ್ಯಾಂಕುಗಳಿಂದ ಸಾಲ‌ ಪಡೆದಿದ್ದರು. 
ಲಾಕ್‌ಡೌನ್‌ ಕಾರಣ ಅವರಿಗೆ ಉದ್ಯೋಗ ಇಲ್ಲದಂತಾಗಿದೆ. ಅವರ ಸಾಲವನ್ನು ಭಾಗಶಃ ಮನ್ನಾ ಮಾಡಿ, ಕನಿಷ್ಠ ಮೂರು ತಿಂಗಳ ಇಎಮ್‌ಐ ಪಾವತಿಯನ್ನು ಮುಂದೂಡಬೇಕು ಎಂದು ಆಗ್ರಹಿಸಿದ್ದಾರೆ. 

ಆಟೊ, ಟ್ಯಾಕ್ಸಿ, ಖಾಸಗಿ ಬಸ್ ಚಾಲಕರು ಮತ್ತು ಸಿಬ್ಬಂದಿ‌ ಹಾಗೂ ಬಂದ್ ಆಗಿರುವ ಹೊಟೇಲ್, ಮಾಲ್, ಚಿತ್ರಮಂದಿರಗಳ ಸಿಬ್ಬಂದಿ, ಡೆಲಿವರಿ ಬಾಯ್‌ಗಳು ಕೆಲಸ ಇಲ್ಲದೆ ಸಂಕಷ್ಟದಲ್ಲಿದ್ದಾರೆ. ಇವರಿಗೆ ಪರಿಹಾರ ಕಲ್ಪಿಸಬೇಕು. ನಗರಗಳಲ್ಲಿ ಉಳಿದುಕೊಂಡಿರುವ ಕಾರ್ಮಿಕರಿಗೆ ಆಶ್ರಯತಾಣ ನಿರ್ಮಿಸಿ, ಊಟದ ವ್ಯವಸ್ಥೆ ಕಲ್ಪಿಸಬೇಕು.

ಕೋವಿಡ್‌ ಪೀಡಿತರಿಗೆ ಚಿಕಿತ್ಸೆ ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ಕೊರೊನಾ ಸೋಂಕಿತರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ಆಕ್ಸಿಜನ್‌, ಹಾಸಿಗೆ, ಅಗತ್ಯ ಔಷಧಗಳನ್ನು ಸಮರ್ಪಕವಾಗಿ ನೀಡಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.