ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿಯ ರಾಕ್ ಸ್ಟಾರ್ ಹೋರಿ ನಿಧನಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಬೇಸರ

Published 7 ಏಪ್ರಿಲ್ 2024, 13:04 IST
Last Updated 7 ಏಪ್ರಿಲ್ 2024, 13:04 IST
ಅಕ್ಷರ ಗಾತ್ರ

ಹಾವೇರಿ: ರಾಜ್ಯದಲ್ಲಿಯೇ ಅತಿ ಹೆಚ್ಚು ಅಭಿಮಾನಿಗಳನ್ನು ಸಂಪಾದಿಸಿದ್ದ ನಮ್ಮ ಹಾವೇರಿಯ ಹೆಮ್ಮೆಯ ರಾಕ್ ಸ್ಟಾರ್ ಹೋರಿ ಇನ್ನಿಲ್ಲ ಎಂಬ ಸುದ್ದಿ ಕೇಳಿ ಮನಸ್ಸಿಗೆ ನೋವಾಯಿತು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಹೋರಿ ಬೆದರಿಸುವ ಸ್ಪರ್ಧೆ ಎಲ್ಲಿಯೇ ಇದ್ದರೂ ಅಲ್ಲಿ ರಾಕ್ ಸ್ಟಾರ್ ಇದ್ದಾನೆಂದರೆ ಉಳಿದವರೆಲ್ಲರಿಗೂ ಸೋಲು ಖಚಿತ ಎನ್ನುವಷ್ಟರ ಮಟ್ಟಿಗೆ ರಾಕ್ ಸ್ಟಾರ್ ಹೋರಿ ಜನಪ್ರಿಯವಾಗಿತ್ತು.

ಅಗಲಿದ ಅಭಿಮಾನಿಗಳ ನೆಚ್ಚಿನ ರಾಕ್ ಸ್ಟಾರ್ ಗೆ ಅಂತಿಮ ನಮನಗಳು. ಮುಂದಿನ ಜನ್ಮದಲ್ಲಿ ಹೋರಿ ಹಬ್ಬದ ತವರೂರಾಗಿರುವ ಹಾವೇರಿಯಲ್ಲಿಯೇ ಮತ್ತೊಮ್ಮೆ ಹುಟ್ಟಿ ಬಾ ಎಂದು ಪ್ರಾರ್ಥಿಸಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT