ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿ: ಪರೀಕ್ಷಾರ್ಥಿಗಳಿಗೆ ಉಚಿತ ಮಾಸ್ಕ್‌

Last Updated 1 ಜುಲೈ 2020, 13:18 IST
ಅಕ್ಷರ ಗಾತ್ರ

ಹಾವೇರಿ: ಕರ್ನಾಟಕ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಜುಲೈ 6ರಿಂದ 15ರವರೆಗೆ ಹಾವೇರಿ ನಗರದ ಜ್ಞಾನಗಂಗಾ ಶಿಕ್ಷಣ ಸಂಸ್ಥೆಯ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯುವ ಕೆ.ಓ.ಎಸ್ (ಕರ್ನಾಟಕ ಮುಕ್ತ ಶಾಲೆ) ಪರೀಕ್ಷೆಗೆ ಹಾಜರಾಗುವ ಎಲ್ಲ ವಿದ್ಯಾರ್ಥಿಗಳಿಗೆ ವಿತರಿಸಲು ವಿವಿಧ ದಾನಿಗಳು ಡಯಟ್‍ಗೆ ಉಚಿತವಾಗಿ ಮಾಸ್ಕ್‌ ಮತ್ತು ಸ್ಯಾನಿಟೈಸರ್‌ ನೀಡಿದ್ದಾರೆ ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನಿರ್ದೇಶಕ ಜಿ.ಎಂ.ಬಸವಲಿಂಗಪ್ಪ ತಿಳಿಸಿದ್ದಾರೆ.

ಹಾವೇರಿ ಮೆಮೋರಿಯಲ್ ಟ್ರಸ್ಟ್‌ನ ಲೀಲಾವತಿ ನಾಗನಗೌಡ ದೊಡ್ಡಗೌಡ್ರ ಹಾಗೂ ಶಿಗ್ಗಾವಿಯ ಅಥರ್ವ ಕ್ಲಿನಿಕ್ ವತಿಯಿಂದ ವಿದ್ಯಾರ್ಥಿಗಳಿಗೆ ವಿತರಿಸಲು ಮಾಸ್ಕ್ ಹಾಗೂ ಸ್ಯಾನಿಟೈಸರ್ ಡಯಟ್‍ಗೆ ಟ್ರಸ್ಟ್ ಅಧ್ಯಕ್ಷ ನಾಗನಗೌಡ ದೊಡ್ಡಗೌಡ್ರ, ವೈದ್ಯರಾದ ಡಾ.ಶಿವಕುಮಾರ ಮೂಲಿಮಠ, ಡಾ.ಸಂಗಮೇಶ ದೊಡ್ಡಗೌಡ್ರ ಹಸ್ತಾಂತರಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಸಾಪದ ವಿವಿಧ ದತ್ತಿ ಪ್ರಶಸ್ತಿಗೆ ಪುಸ್ತಕಗಳ ಆಹ್ವಾನ

ಹಾವೇರಿ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿರುವ ವಿವಿಧ 47 ದತ್ತಿ ಪ್ರಶಸ್ತಿಗಳಿಗಾಗಿ 2019ನೇ ಸಾಲಿನಲ್ಲಿ ಪ್ರಕಟವಾದ ಪುಸ್ತಕಗಳನ್ನು ಆಹ್ವಾನಿಸಲಾಗಿದೆ.

ಪ್ರತಿ ಪ್ರವೇಶಕ್ಕೆ ತಲಾ ಮೂರು ಪುಸ್ತಕಗಳನ್ನು ಕಳುಹಿಸಬೇಕು. ಪರಿಶೀಲನೆಗೆ ಬರುವ ಪುಸ್ತಕಗಳನ್ನು ಹಿಂದಿರುಗಿಸಲಾಗುವುದಿಲ್ಲ. ಬಹುಮಾನದ ಬಗ್ಗೆ ಪರಿಷತ್ತು ನೇಮಿಸುವ ತೀರ್ಪುಗಾರರು ನೀಡುವ ಶಿಫಾರಸುಗಮನಿಸಿ ಪರಿಷತ್ತು ಅಂತಿಮ ನಿರ್ಧಾರ ಕೈಗೊಳ್ಳುತ್ತ್ತದೆ. ಪಿ.ಎಚ್.ಡಿ. ಗ್ರಂಥಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ. ಸ್ಪರ್ಧೆಯಲ್ಲಿ ಭಾಗವಹಿಸುವವರು ತಮ್ಮ ಹೆಸರು, ವಿಳಾಸ, ದೂರವಾಣಿ ಹಾಗೂ ಮೊಬೈಲ್ ಸಂಖ್ಯೆಗಳನ್ನು ನಮೂದಿಸಬೇಕು. ಹೆಚ್ಚಿನ ವಿವರಗಳಿಗೆ ಸ್ವ-ವಿಳಾಸದ ಸ್ಟ್ಯಾಂಪ್‌ ಹಚ್ಚಿದ ಲಕೋಟೆ ಇಟ್ಟು ಪತ್ರ ಬರೆಯಬಹುದಾಗಿದೆ.

ಸ್ಪರ್ಧೆಗೆ ಪುಸ್ತಕಗಳನ್ನು ಕಳುಹಿಸಲು ಜುಲೈ 31 ಕೊನೆಯ ದಿನವಾಗಿದೆ. ದತ್ತಿ ಪ್ರಶಸ್ತಿಗಳ ವಿವರ ಸೇರಿದಂತೆ ಮತ್ತಿತರ ಮಾಹಿತಿಗಾಗಿ ಗೌರವ ಕಾರ್ಯದರ್ಶಿಗಳು, ಕನ್ನಡ ಸಾಹಿತ್ಯ ಪರಿಷತ್ತು, ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ ಬೆಂಗಳೂರು-18 ಅಥವಾ ದೂ: 080-26623584, 26612991ಗಳಿಗೆ ಸಂಪರ್ಕಿಸಬಹುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ವ.ಚ. ಚನ್ನೇಗೌಡ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT