ಹಾವೇರಿ: ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಜಿಲ್ಲೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ತೆರಳಿ ಗೌರವ ಸಲ್ಲಿಸುವ ಜಿಲ್ಲಾಡಳಿತದ ಕಾರ್ಯಕ್ರಮದ ಅಂಗವಾಗಿ ಸ್ವಾತಂತ್ರ್ಯ ಯೋಧ 104 ವರ್ಷದ ಹಿರಿಯ ಜೀವಿ ಮಳ್ಳಪ್ಪ ಸಿದ್ದಪ್ಪ ಕೊಪ್ಪದ ಅವರ ಮನೆಗೆ ತೆರಳಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸನ್ಮಾನಿಸಿದರು.

ಬ್ಯಾಡಗಿ ತಾಲ್ಲೂಕು ಹೀರೆಅಣಜಿ ಗ್ರಾಮದ ಮಳ್ಳಪ್ಪ ಸಿದ್ದಪ್ಪ ಕೊಪ್ಪದ ಅವರುಚಲೇಜಾವ್ ಚಳವಳಿ ಸೇರಿದಂತೆ ಭಾರತ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದರು. ಇವರ ಮನೆಗೆ ಶುಕ್ರವಾರ ತೆರಳಿದ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ, ಮಳ್ಳಪ್ಪ ಅವರ ಯೋಗಕ್ಷೇಮ ವಿಚಾರಿಸಿದರು.

ಮಳ್ಳಪ್ಪ ಅವರು ಸ್ವಾತಂತ್ರ್ಯ ಹೋರಾಟದ ಕ್ಷಣಗಳನ್ನು ಹಂಚಿಕೊಂಡರು. 75ನೇ ವರ್ಷದ ಸ್ವಾತಂತ್ರ್ಯ ಸಂಭ್ರಮದ ಸಂದರ್ಭದಲ್ಲಿ ಸ್ವಾತಂತ್ರ್ಯ ಯೋಧರನ್ನು ನೆನಪಿಸಿಕೊಂಡು ಅವರ ಮನೆ ಬಾಗಿಲಿಗೆ ತೆರಳಿ ಗೌರವಿಸುತ್ತಿರುವ ಕ್ರಮ ಕುರಿತಂತೆ ಮೆಚ್ಚುಗೆ ವ್ಯಕ್ತಪಡಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಯೋಗೇಶ್ವರ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿಜಯಕುಮಾರ ಸಂತೋಷ್, ಉಪವಿಭಾಗಾಧಿಕಾರಿ ಶಿವಾನಂದ ಉಳ್ಳಾಗಡ್ಡಿ, ವಾರ್ತಾಧಿಕಾರಿ ಬಿ.ಆರ್.ರಂಗನಾಥ್, ಬ್ಯಾಡಗಿ ತಹಶೀಲ್ದಾರ್, ರವಿ ಕೊರವರ, ಹಾವೇರಿ ತಹಶೀಲ್ದಾರ ಗಿರೀಶ ಸ್ವಾದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.