ಬುಧವಾರ, ಜನವರಿ 19, 2022
27 °C
ಸಂವಿಧಾನ ದಿನಾಚರಣೆಯಲ್ಲಿ ನ್ಯಾ.ಯಾದವ ವನಮಾಲಾ ಆನಂದರಾವ್ ಹೇಳಿಕೆ

ಸಂವಿಧಾನದ ಆಶೋತ್ತರ ಈಡೇರಿಸಿ: ಯಾದವ ವನಮಾಲಾ ಆನಂದರಾವ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ‘ಪ್ರತಿಯೊಬ್ಬ ಪ್ರಜೆಯೂ ಸಂವಿಧಾನದ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳನ್ನು ತಿಳಿದು ನಡೆಯಬೇಕು’ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಯಾದವ ವನಮಾಲಾ ಆನಂದರಾವ್ ಹೇಳಿದರು.

ನಗರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ವಕೀಲರ ಸಂಘ ಹಾಗೂ ಅಭಿಯೋಜನಾ ಇಲಾಖೆ ಸಹಯೋಗದಲ್ಲಿ ಶುಕ್ರವಾರ ನಡೆದ ಸಂವಿಧಾನ ದಿನಾಚರಣೆ ಪ್ರಯುಕ್ತ ಕಾನೂನು ಜಾಗೃತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಸಂವಿಧಾನದ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ನಾವೆಲ್ಲರೂ ಕಾರ್ಯೋನ್ಮುಖರಾಗಬೇಕು. ದೇಶದ ಸಾರ್ವಭೌಮತ್ವ ಅಖಂಡತೆ, ಏಕತೆ ಎತ್ತಿ ಹಿಡಿಯುವ ಮೂಲಕ ವೈಯಕ್ತಿಕ ಮತ್ತು ಸಾಮೂಹಿಕ ಸಾಧನೆಯ ಮೂಲಕ ಉನ್ನತ ಮಟ್ಟದ ಸಾಧನೆ ಮಾಡಿ ದೇಶದ ಪ್ರಗತಿಗೆ ಶ್ರಮಿಸಬೇಕು’ ಎಂದು ಕರೆ ನೀಡಿದರು.

ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಎಫ್.ಟಿ.ಎಸ್.ಸಿ-01ರ ನ್ಯಾಯಾಧೀಶರಾದ ಕೆ.ಎಸ್.ಜ್ಯೋತಿಶ್ರೀ, ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಈ ರಾಜೀವಗೌಡ, ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ಕಿರಣ ಕಿಣಿ, ಹಾವೇರಿ ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಸಿ.ಜೆ.ಎಂ. ನ್ಯಾಯಾಲಯದ ನ್ಯಾಯಾಧೀಶರಾದ ಎಲ್.ಆರ್.ಕುರಣೆ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಎ.ಸಿ.ನೀರಲಗಿ, ಕಾರ್ಯದರ್ಶಿಗಳಾದ ಐ.ಎಸ್. ನಂದಿ, ಸರ್ಕಾರಿ ಅಭಿಯೋಜಕ ಸಿದ್ಧಾರೂಡ ಗೆಜ್ಜಿಹಳ್ಳಿ, ಜಿ.ಸಿ.ಗಿರಿಯಪ್ಪನವರ ಭಾಗವಹಿಸಿದ್ದರು.

ಹಿರಿಯ ಸಿವಿಲ್‌ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪುಟ್ಟರಾಜು ಸ್ವಾಗತಿಸಿದರು.

ಪ್ರಮಾಣ ವಚನ ಸ್ವೀಕಾರ

ಹಾವೇರಿ ಸಂವಿಧಾನ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಪ್ರಮಾಣ ವಚನ ಸ್ವೀಕರಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಶಿವಾನಂದ ಉಳ್ಳಾಗಡ್ಡಿ ಅವರು ಸಂವಿಧಾನ ದಿನದ ಕುರಿತು ಪ್ರಮಾಣ ವಚನ ಬೋಧಿಸಿದರು. ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು