ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿ: ಸರ್ವಧರ್ಮಗಳ ಪ್ರಾರ್ಥನೆ, ಗೀತ ನಮನ

ಜಿಲ್ಲೆಯಾದ್ಯಂತ ಮಹಾತ್ಮ ಗಾಂಧಿ ಹಾಗೂ ಲಾಲ್‍ಬಹದ್ದೂರ್‌ ಶಾಸ್ತ್ರೀಜಿ ಜಯಂತಿ
Last Updated 2 ಅಕ್ಟೋಬರ್ 2021, 11:17 IST
ಅಕ್ಷರ ಗಾತ್ರ

ಹಾವೇರಿ: ಮಹಾತ್ಮ ಗಾಂಧಿ ಹಾಗೂ ಲಾಲ್‍ ಬಹದ್ದೂರ್‌ ಶಾಸ್ತ್ರಿ ಅವರ ಜನ್ಮ ದಿನದ ಅಂಗವಾಗಿ ಗಾಂಧಿ ಪ್ರಣೀತ ಗೀತೆಗಳ ಗಾಯನ, ಸರ್ವಧರ್ಮ ಪ್ರಾರ್ಥನೆ, ಸದ್ಭಾವನಾ ಗೀತೆಗಳ ಗಾಯನ, ಉಭಯ ನಾಯಕರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಾರ್ವಜನಿಕ ಶಿಕ್ಷಣ, ನಗರಸಭೆ ವತಿಯಿಂದ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಮೊಹಮ್ಮದ್‌ ರೋಶನ್‌, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಅವರು ನಗರದ ಮಹಾತ್ಮಗಾಂಧೀಜಿ ವೃತ್ತದಲ್ಲಿ ಗಾಂಧಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವನಮನ ಸಲ್ಲಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿದ್ವಾನ್ ಜಿ.ಎಸ್. ಭಟ್‍ ಅವರಿಂದ ಭಗವದ್ಗೀತೆ, ಎಸ್.ಆರ್. ಮೋಹಿಸಿನ್ ಅವರಿಂದ ಕುರಾನ್ ಹಾಗೂ ಟೆರಿನ್ಸ್ ಗೋನಸಾಲವಿಲ್‍ರಿಂದ ಬೈಬಲ್ ಪಠಣ ಮೂಲಕ ಸರ್ವಧರ್ಮ ಪ್ರಾರ್ಥನೆ ಸಲ್ಲಿಸಲಾಯಿತು.

ಗಾಂಧೀಜಿಯವರಿಗೆ ಬಹು ಪ್ರಿಯವಾದ ‘ವೈಷ್ಣವಿ ಜನತೋ’ ಹಾಗೂ ‘ರಘುಪತಿ ರಾಘವ ರಾಜಾರಾಂ’ ಹಾಗೂ ಇತರ ಗೀತೆಗಳನ್ನು ರೇಖಾ ಕುಲಕರ್ಣಿ ಹಾಗೂ ಪ್ರಶಾಂತ ಸಂಗಡಿಗರು ಸುಶ್ರಾವ್ಯವಾಗಿ ಹಾಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ಶಿವಾನಂದ ಉಳ್ಳಾಗಡ್ಡಿ, ತಹಶೀಲ್ದಾರ್‌ ಗಿರೀಶ ಸ್ವಾದಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಶಶಿಕಲಾ ಹುಡೇದ, ವಾರ್ತಾಧಿಕಾರಿ ಬಿ.ಆರ್. ರಂಗನಾಥ್, ಡಿಡಿಪಿಐ ಅಂದಾನಪ್ಪ ವಡಗೇರಿ, ಪೌರಾಯುಕ್ತ ಪರಶುರಾಮ ಚಲವಾದಿ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖಾ ಅಧಿಕಾರಿಗಳು ಭಾಗವಹಿಸಿದ್ದರು.

ವಾರ್ತಾ ಭವನ
ಹಾವೇರಿ:
ಮಹಾತ್ಮಗಾಂಧಿ ಹಾಗೂ ಲಾಲ್‍ಬಹದ್ದೂರ್‌ ಶಾಸ್ತ್ರಿ ಅವರ ಜಯಂತಿಯನ್ನು ನಗರದ ಜಿಲ್ಲಾ ವಾರ್ತಾ ಭವನದಲ್ಲಿ ಸರಳವಾಗಿ ಆಚರಿಸಲಾಯಿತು.

ಶನಿವಾರ ಬೆಳಿಗ್ಗೆ ಮಹಾತ್ಮಗಾಂಧೀಜಿ ಹಾಗೂ ಲಾಲ್‍ಬಹದ್ದೂರ್‌ ಶಾಸ್ತ್ರಿ ಅವರ ಭಾವಚಿತ್ರಕ್ಕೆ ವಾರ್ತಾಧಿಕಾರಿ ಡಾ.ಬಿ.ಆರ್. ರಂಗನಾಥ್ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.

ವಾರ್ತಾ ಸಹಾಯಕರಾದ ಭಾರತಿ, ಸಿಬ್ಬಂದಿಗಳಾದ ಎಚ್.ಎಂ.ನಾಯ್ಕ, ದೇವಕಿ, ರಾಮವ್ವ ಕೊರವರ, ಜ್ಯೋತಿ ಅಮರಗೋಳ, ಅಪ್ರೆಂಟಿಸ್ ಅಭ್ಯರ್ಥಿಗಳಾದ ಕೆಂಚಮ್ಮ ಮೊಟೇಬೆನ್ನೂರ, ಹೊನ್ನಮ್ಮ ಅಂಬಲಿ ಹಾಗೂ ಸುಮಾ ಗೌಡ್ರ ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT