ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶಿಗ್ಗಾವಿ: ಗಣೇಶ ಮೂರ್ತಿಗೆ ಅದ್ದೂರಿ ಸ್ವಾಗತ

Published : 8 ಸೆಪ್ಟೆಂಬರ್ 2024, 13:48 IST
Last Updated : 8 ಸೆಪ್ಟೆಂಬರ್ 2024, 13:48 IST
ಫಾಲೋ ಮಾಡಿ
Comments

ಶಿಗ್ಗಾವಿ: ತಾಲ್ಲೂಕಿನಾದ್ಯಂತ ಶನಿವಾರ ಗಣೇಶನ ಮೂರ್ತಿಯನ್ನು ಮೆರವಣಿಗೆ ಮೂಲಕ ಕರೆತಂದು ಸಂಭ್ರಮದಿಂದ ಪ್ರತಿಷ್ಠಾಪಿಸಲಾಯಿತು.

ಪ್ರತಿ ಗಲ್ಲಿ, ಓಣಿಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಬಾಳೆ, ಮಾವಿನ ತಳಿರು ತೋರಣಗಳಿಂದ ಶೃಂಗರಿಸಲಾಗಿದೆ. ಝಾಂಜ್ ಮೇಳ, ಡೊಳ್ಳು ಮೇಳ, ಭಜನೆ ಸೇರಿದಂತೆ ವಿವಿಧ ವಾದ್ಯವೈಭವದಿಂದ ಗಣೇಶನ ಮೂರ್ತಿ ಮೆರವಣಿಗೆ ಸಾಗಿತು.

ಪ್ರತಿ ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಂಡಳಿ ನಿತ್ಯ ಬೆಳಿಗ್ಗೆ, ಸಂಜೆ ವಿಶೇಷ ಪೂಜೆ ಹಮ್ಮಿಕೊಳ್ಳಲಾಗುತ್ತಿದೆ. ಸಾಂಸ್ಕೃತಿ, ಮನರಂಜನೆ ಕಾರ್ಯಕ್ರಮ, ಭಕ್ತಿ ಗೀತೆಗಳ ಗೀತ ಗಾಯನ, ಸಂಗೀತ, ಜಾನಪದ ಕಾರ್ಯಕ್ರಮ, ವಿಶೇಷ ಉಪನ್ಯಾಸ ಮಾಲೀಕೆಗಳನ್ನು ಹಮ್ಮಿಕೊಂಡು ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನಗಳನ್ನು ವಿತರಿಸಲಾಯಿತು.

ಗಣೇಶ ಮೂರ್ತಿ ನೋಡಲು ಬರುವ ಭಕ್ತರಿಗೆ ಅನ್ನಪ್ರಸಾದ ವಿತರಣೆ ಮಾಡಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT