ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ಯಾಸ್ ಸ್ಫೋಟ: ಒಂದೇ ಕುಟುಂಬದ ಐವರಿಗೆ ಗಾಯ

Last Updated 15 ಜನವರಿ 2022, 16:15 IST
ಅಕ್ಷರ ಗಾತ್ರ

ಹಂಸಭಾವಿ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ ಐವರು ತೀವ್ರವಾಗಿ ಗಾಯಗೊಂಡ ಘಟನೆ ಇಲ್ಲಿಗೆ ಸಮೀಪದ ಕಚವಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಕಚವಿಯ ಚಿದಂಬರರಾವ್ ನಾಡಗೇರ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ.

ಗ್ಯಾಸ್ ಜೋಡಣೆ ವೇಳೆ ಸೋರಿಕೆಯಾಗಿ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆ ಮನೆಯ ಚಾವಣಿ ಛಿದ್ರಗೊಂಡಿದೆ. ಜೊತೆಗೆ ಮನೆಯಲ್ಲಿದ್ದ ಚಿದಂಬರರಾವ್, ಪುಷ್ಪಾ, ಸೀತಾರಾಂ, ಗೋವಿಂದರಾಜ, ತನು ಎಂಬುವವರು ತೀವ್ರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಿದ್ದು, ಅವರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಈ ಕುರಿತು ಹಂಸಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪಿಎಸ್ಐ ದೇವರಾಜ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT