ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿ: ಕೆನ್ನೆಗೆ ಮುತ್ತಿಟ್ಟ ಆರೋಪಿಗೆ ಶಿಕ್ಷೆ

Last Updated 6 ಜನವರಿ 2020, 15:33 IST
ಅಕ್ಷರ ಗಾತ್ರ

ಹಾವೇರಿ: ಬಾಲಕಿ ಕೆನ್ನೆಗೆ ಮುತ್ತಿಟ್ಟ ಆರೋಪಿ ಸಂತೋಷ ಶಂಕ್ರಪ್ಪ ಲಮಾಣಿಗೆ (24) ಎಂಟು ವರ್ಷ ಶಿಕ್ಷೆ ಹಾಗೂ ₹ 25 ಸಾವಿರ ದಂಡ ವಿಧಿಸಿ ಒಂದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್‌ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.

ರಾಣೆಬೆನ್ನೂರು ತಾಲ್ಲೂಕಿನ ತಾಂಡಾವೊಂದರಲ್ಲಿ ಆಗಸ್ಟ್‌ 2019 ರಂದು ಗಣೇಶ ಮೂರ್ತಿ ಪ್ರತಿಷ್ಠಾಪನೆ ಸಂದರ್ಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೋಡಿ ಮನೆಗೆ ವಾಪಸ್ ಬರುತ್ತಿದ್ದ ಬಾಲಕಿ ಕೆನ್ನೆಗೆ ಆರೋಪಿ ಸಂತೋಷ ಮುತ್ತು ಕೊಟ್ಟಿದ್ದರಿಂದ ಸಂತ್ರಸ್ತ ಬಾಲಕಿಯು ಚಾನಲ್ ನೀರಿನಲ್ಲಿ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು. ಇದರಿಂದಾಗಿ ರಾಣೆಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಆರೋಪಿಯ ವಿರುದ್ಧ ಸಾಕ್ಷಾಧಾರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ನ್ಯಾಯಾಧೀಶರು ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿ ಆರೋಪಿ ಮೇಲಿನ ಆರೋಪಗಳು ಸಾಬೀತಾದ ಕಾರಣ ಅಪರಾಧಿ ಸಂತೋಷ ಶಂಕ್ರಪ್ಪ ಲಮಾಣಿಗೆ ಭಾರತ ದಂಡ ಸಂಹಿತೆ ಕಲಂ 354(ಎ) ಐಪಿಸಿ ಮತ್ತು ಕಲಂ 8 ಪೊಕ್ಸೋ ಕಾಯ್ದೆಯಡಿ 5 ವರ್ಷಗಳ ಶಿಕ್ಷೆ ಹಾಗೂ ₹15 ಸಾವಿರ ದಂಡ, ಕಲಂ 12 ಪೊಕ್ಸೋ ಕಾಯ್ದೆಯಡಿ ಆರೋಪಿಗೆ 3 ವರ್ಷ ಶಿಕ್ಷೆ ಹಾಗೂ 10 ಸಾವಿರ ದಂಡವಿಧಿಸಿದ್ದು, ಸಂತ್ರಸ್ತೆ ಕುಟುಂಬಕ್ಕೆ ಪರಿಹಾರವಾಗಿ ₹20 ಸಾವಿರ ನೀಡಲು ಆದೇಶಿಸಿ ತೀರ್ಪು ನೀಡಲಾಗಿದೆ. ಸರ್ಕಾರದ ಪರವಾಗಿ ವಿಶೇಷ ನ್ಯಾಯಾಲಯದ ವಕೀಲ ವಿನಾಯಕ ಎಸ್‌.ಪಾಟೀಲ ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT