ಶುಕ್ರವಾರ, ಜೂನ್ 25, 2021
21 °C

ಸರ್ವರಿಗೂ ಉಚಿತ ಲಸಿಕೆ ನೀಡಿ: ಎಸ್‌ಎಫ್‌ಐ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಸರ್ವರಿಗೂ ಉಚಿತವಾಗಿ ಕೋವಿಡ್‌ ಲಸಿಕೆ ನೀಡಬೇಕು ಮತ್ತು ದೇಶದ ಜನರಿಗೆ ಅಗತ್ಯವಾದ ಆಮ್ಲಜನಕ, ವೆಂಟಿಲೇಟರ್, ಹಾಸಿಗೆ ಸೌಲಭ್ಯ ಕಲ್ಪಿಸಬೇಕು ಎಂದು ಎಸ್‌ಎಫ್‌ಐ ಕೇಂದ್ರ ಸಮಿತಿ ಕರೆ ನೀಡಿದ ಅಂಗವಾಗಿ ಶುಕ್ರವಾರ ನಗರದಲ್ಲಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಶಿವಾಜಿನಗರದ ಎಸ್ಎಫ್ಐ ಕಚೇರಿ ಎದುರು ಕಾರ್ಯಕರ್ತರು ಪೋಸ್ಟರ್ ಪ್ರದರ್ಶನ ಮಾಡಿದರು. 

ಎಸ್ಎಫ್ಐ ಜಿಲ್ಲಾ ಸಹಕಾರ್ಯದರ್ಶಿ ಬಸವರಾಜ ಭೋವಿ ಮಾತನಾಡಿ, ‘ದೇಶದಲ್ಲಿ ಕೋವಿಡ್‌ ಎರಡನೇ ಅಲೆ ತೀವ್ರಗೊಳ್ಳುತ್ತಿದೆ. ಲಸಿಕೆಯ ವೆಚ್ಚವನ್ನು ನಾಗರಿಕರ ಮೇಲೆ ಹೇರದೆ, ಸರ್ಕಾರವೇ ಸಂಪೂರ್ಣವಾಗಿ ಭರಿಸಬೇಕು. ರಾಜ್ಯಗಳಿಗೆ ಲಸಿಕೆಗಳನ್ನು ಖಾತರಿಪಡಿಸುವ ಬದ್ಧತೆಯಿಂದ ಕೇಂದ್ರ ಸರ್ಕಾರ ಹಿಂದೆ ಸರಿದಿದೆ. ಲಸಿಕೆ ಕೊರತೆ ಹಿನ್ನೆಲೆಯಲ್ಲಿ ತಯಾರಕರು ರಾಜ್ಯ ಸರ್ಕಾರಗಳಿಂದ ಹೆಚ್ಚಿನ ಬೆಲೆಗಳನ್ನು ಸುಲಿಗೆ ಮಾಡಲು ಕಾರಣವಾಗುತ್ತಿದೆ ಎಂದು ತಿಳಿಸಿದರು. 

ಖಾಸಗಿ ಕಂಪನಿಗಳ ಹಿತಾಸಕ್ತಿಗೆ ಸರ್ಕಾರ ಮಣಿದರೆ, ಭವಿಷ್ಯದಲ್ಲಿ ಜನರ ಸಾವು–ನೋವುಗಳು ಹೆಚ್ಚಳವಾಗುತ್ತದೆ. ಹೀಗಾಗಿ ಸರ್ವರಿಗೂ ಉಚಿತವಾಗಿ ಲಸಿಕೆ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. 

ಮುಖಂಡರಾದ ಅರುಣ್ ಕಡಕೋಳ, ಪ್ರತೀಕ ಪಿ, ನವೀನ ಕೋರಿ, ಕಿರಣ ಎಂ, ಪ್ರಸನ್ನ ಬಿ.ಕೆ, ವೆಂಕಟೇಶ ಕಲಾಲ್ ಇದ್ದರು. 

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು