ಸಾಲ ಮರುಪಾವತಿಗೆ ಕಾಲಾವಕಾಶ ನೀಡಿ: ಹಣಕಾಸು ಸಂಸ್ಥೆಗಳಿಗೆ ಕರವೇ ಆಗ್ರಹ

ರಟ್ಟೀಹಳ್ಳಿ: ಲಾಕ್‌ಡೌನ್‌ನಿಂದಾಗಿ ಸಣ್ಣ ಪುಟ್ಟ ವ್ಯಾಪಾರಸ್ಥರು ಸಂಕಷ್ಟದಲ್ಲಿದ್ದು, ಅವರ ಕುಟುಂಬ ನಿರ್ವಹಣೆ ಕಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಬ್ಯಾಂಕ್ ಮತ್ತು ಕಿರು ಹಣಕಾಸು ಸಂಸ್ಥೆಗಳಿಂದ ಪಡೆದ ಸಾಲ ಮರು ಪಾವತಿಗೆ ಸ್ವಲ್ಪ ದಿನಗಳ ಕಾಲಾವಕಾಶ ಅಗತ್ಯವಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಲ್ಲಪ್ಪ ಮರಾಠೆ ಆಗ್ರಹಿಸಿದರು.
ಅವರು ಶುಕ್ರವಾರ ಕರ್ನಾಟಕ ರಕ್ಷಣಾ ವೇದಿಕೆ ರಟ್ಟೀಹಳ್ಳಿ ತಾಲ್ಲೂಕು ಘಟಕದಿಂದ ತಹಶೀಲ್ದಾರ್‌ಗೆ ಈ ಬಗ್ಗೆ ಮನವಿ ಸಲ್ಲಿಸಿ ಮಾತನಾಡಿದರು.
ಈ ಬಗ್ಗೆ ತಹಶೀಲ್ದಾರ್ ಅವರು ಬ್ಯಾಂಕ್ ಹಾಗೂ ಹಣಕಾಸು ಸಂಸ್ಥೆಗಳಿಗೆ ನಿರ್ದೇಶನ ನೀಡಬೇಕೆಂದು ವಿನಂತಿಸಿದರು. ವಿಠಲ್ ನಾಮದೇವ, ಯೂಸೂಫ್ ಸೈಕಲಗಾರ, ರಿಯಾಜ ಅಹ್ಮದ ಲೋಹಾರ, ಮಂಜಣ್ಣ ಪವಾರ, ಹಬೀಬ ದಾರುಗಾರ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.