ಗುರುವಾರ , ಸೆಪ್ಟೆಂಬರ್ 23, 2021
28 °C

ನೆಹರು ಓಲೇಕಾರಗೆ ಸಚಿವ ಸ್ಥಾನ ನೀಡಿ: ಚಲವಾದಿ ಮಹಾಸಭಾದ ಶಂಭು ಕಳಸದ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ನೂತನವಾಗಿ ರಚನೆಯಾಗಲಿರುವ ರಾಜ್ಯ ಸಚಿವ ಸಂಪುಟದಲ್ಲಿ ದಲಿತ (ಬಲಗೈ) ಸಮುದಾಯದ ಶಾಸಕ ನೆಹರು ಓಲೇಕಾರ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಚಲವಾದಿ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಶಂಭು ಕಳಸದ ಒತ್ತಾಯಿಸಿದರು. 

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ನೆಹರು ಓಲೇಕಾರ ಅವರು ಉತ್ತರ ಕರ್ನಾಟಕದ ಬಲಗೈ ಸಮುದಾಯದ ಏಕೈಕ ಶಾಸಕರಾಗಿದ್ದಾರೆ. 40 ವರ್ಷಗಳಿಂದ ರಾಜಕಾರಣದಲ್ಲಿದ್ದು, ಬ್ಯಾಡಗಿ ಮತ್ತು ಹಾವೇರಿ ವಿಧಾನಸಭಾ ಕ್ಷೇತ್ರಗಳಿಂದ ಒಟ್ಟು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಇವರಿಗೆ ಸಚಿವ ಸ್ಥಾನ ನೀಡಿದರೆ ಜಿಲ್ಲೆಯ ಅಭಿವೃದ್ಧಿ ಮತ್ತಷ್ಟು ವೇಗ ಪಡೆಯುತ್ತದೆ ಎಂದು ತಿಳಿಸಿದ್ದಾರೆ. 

ರಾಜ್ಯದಲ್ಲಿ ಚಲವಾದಿ ಸಮುದಾಯ 45 ಲಕ್ಷಕ್ಕೂ ಅಧಿಕ ಜನಸಂಖ್ಯೆ ಇದೆ. ನಮ್ಮ ಸಮುದಾಯದ ನಾಲ್ವರು ಶಾಸಕರು ಇದ್ದಾರೆ. ಆದರೆ, ಇದುವರೆಗೆ ಸಮುದಾಯದ ಯಾವುದೇ ಶಾಸಕರಿಗೆ ಸಚಿವ ಸ್ಥಾನ ನೀಡದ ಕಾರಣಕ್ಕೆ ಸಮಾಜಕ್ಕೆ ಅನ್ಯಾಯವಾಗಿದೆ. ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಆಯೋಗದ ಅಧ್ಯಕ್ಷರೂ ಆಗಿ ಉತ್ತಮ ಸೇವೆ ಸಲ್ಲಿಸಿರುವ ನೆಹರು ಅವರಿಗೆ ನ್ಯಾಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು. 

ಒಂದು ವೇಳೆ, ಸಚಿವ ಸ್ಥಾನ ಸಿಗದಿದ್ದರೆ ರಾಜ್ಯದಾದ್ಯಂತ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು. 

ಪತ್ರಿಕಾಗೋಷ್ಠಿಯಲ್ಲಿ ತಮ್ಮಣ್ಣ ಕಾಳೆ, ವಿರೂಪಾಕ್ಷಪ್ಪ ಮೂಡೂರ, ಹನುಮಂತಪ್ಪ ದೊಡ್ಡಮನಿ, ಶಿವಶಂಕರ ಮೂರೂರು, ಗುತ್ತಪ್ಪ ಮಾಳಗಿ ಇದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು