ಮಂಗಳವಾರ, ಏಪ್ರಿಲ್ 7, 2020
19 °C
ವಿಶ್ವ ಶ್ರವಣ ದಿನಾಚರಣೆಯಲ್ಲಿ ಸಿಇಒ ಸೂಚನೆ

ಉತ್ತಮ ಆರೋಗ್ಯ ಸೇವೆ ನೀಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಆರೋಗ್ಯ ಸಮಸ್ಯೆಗಳಿಗೆ ಹೆಚ್ಚು ಹಣ ಖರ್ಚು ಮಾಡುವವರು ಗ್ರಾಮೀಣ ಪ್ರದೇಶದ ಬಡ ವರ್ಗದವರು. ಹಾಗಾಗಿ ಸರ್ಕಾರದ ಪ್ರತಿಯೊಂದು ಆರೋಗ್ಯ ಸೌಲಭ್ಯಗಳನ್ನು ಗ್ರಾಮೀಣ ಪ್ರದೇಶ ಜನತೆಗೆ ತಲುಪಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ರಮೇಶ ದೇಸಾಯಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ವಿಶ್ವ ಶ್ರವಣ ದಿನಾಚರಣೆ ಹಾಗೂ ಶ್ರವಣ ಜಾಗೃತಿ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ನಾನು ಜಿಲ್ಲೆಯ ಕೆಲವು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕರು ಹಲವು ದೂರುಗಳನ್ನು ಹೇಳುತ್ತಾರೆ. ವೈದ್ಯರು ಸಮಯಕ್ಕೆ ಸರಿಯಾಗಿ ಬರುವುದಿಲ್ಲ, ಔಷಧಗಳನ್ನು ಹೊರಗಡೆ ಬರೆದು ಕೊಡುತ್ತಾರೆ ಹಾಗೂ ಆಸ್ಪತ್ರೆಗಳಲ್ಲಿ ಮೂಲಸೌಕರ್ಯಗಳ ಕೊರತೆ ಕುರಿತಂತೆ ದೂರುಗಳು ಕೇಳಿಬರುತ್ತವೆ. ಈ ರೀತಿಯ ಸಮಸ್ಯೆಗಳಿಗೆ ಕೂಡಲೇ ಪರಿಹಾರ ಕಲ್ಪಿಸಬೇಕು ಎಂದರು. 

ಬ್ಯಾಡಗಿ ತಾಲ್ಲೂಕು ವೈದ್ಯಾಧಿಕಾರಿ ಡಾ.ಪುಟ್ಟರಾಜ ‘ವಿಶ್ವ ಶ್ರವಣ ದಿನ’ ಕುರಿತು ಮಾತನಾಡಿ, ಪ್ರಪಂಚದಲ್ಲಿ 466 ಮಿಲಿಯನ್ ಹಾಗೂ ದೇಶದಲ್ಲಿ 63 ಜನರು ಕಿವಿಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ಹೇಳಿದರು.

ಕಾಯಕಲ್ಪ ಪ್ರಶಸ್ತಿ ಪ್ರದಾನ

ಸಮಾರಂಭದಲ್ಲಿ ಆಸ್ಪತ್ರೆಗಳ ಸ್ವಚ್ಛತೆ, ತ್ಯಾಜ್ಯ ನಿರ್ವಹಣೆ, ಉತ್ತಮ ಸೇವೆ ಒಳಗೊಂಡಂತೆ ಆರು ಅಂಶಗಳ ನಿರ್ವಹಣೆಯಲ್ಲಿ ಕಾಯಕಲ್ಪ ಪ್ರಶಸ್ತಿ ಪಡೆದ ಆಸ್ಪತ್ರೆಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ರಾಜ್ಯ ಮಟ್ಟದಲ್ಲಿ ಸಮಾಧಾನಕರ ಬಹುಮಾನ ಪಡೆದ ಬ್ಯಾಡಗಿ ತಾಲ್ಲೂಕು ಆಸ್ಪತ್ರೆಗೆ ₹1 ಲಕ್ಷ, ರಾಜ್ಯ ಮಟ್ಟದಲ್ಲಿ ‘ಸ್ವಚ್ಛ ರತ್ನ’ ಪ್ರಶಸ್ತಿಗೆ ಬಾಜನವಾದ ಬಂಕಾಪೂರ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಅಕ್ಕಿಆಲೂರ ಸಮುದಾಯ ಆರೋಗ್ಯ ಕೇಂದ್ರ ತಲಾ ₹1 ಲಕ್ಷ, ಜಿಲ್ಲಾ ಮಟ್ಟದ ಅತ್ಯುತ್ತಮ ಆರೋಗ್ಯ ಕೇಂದ್ರ ಪ್ರಶಸ್ತಿಯನ್ನು ಪಡೆದ ಕಬ್ಬೂರ, ಕದರಮಂಡಲಗಿ, ಕಾಟೇನಹಳ್ಳಿ, ಹಾವನೂರು, ತಡಕನಹಳ್ಳಿ, ಕೋಡ ಹಾಗೂ ಶಂಕ್ರಿಪುರ ಆರೋಗ್ಯ ಕೇಂದ್ರಗಳಿಗೆ ಪ್ರಶಸ್ತಿ ವಿತರಿಸಲಾಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಂದ್ರ ದೊಡ್ಡಮನಿ, ಜಿಲ್ಲಾ ನೋಡಲ್ ಅಧಿಕಾರಿ ಡಾ.ಕುಶಾಲ್, ಡಾ.ಜಗದೀಶ ಪಾಟೀಲ, ಡಾ.ನೀಲೇಶ. ಡಾ.ವಿರಕ್ತಮಠ ಉಪಸ್ಥಿತರಿದ್ದರು. ಜಿಲ್ಲಾ ಆರ್.ಸಿ.ಎಚ್.ಅಧಿಕಾರಿ ಡಾ.ಜಯಾನಂದ ಪ್ರಾಸ್ತಾವಿಕವಾಗಿ ಮಾತನಾಡಿದರು. ಕುಟುಂಬ ಕಲ್ಯಾಣಾಧಿಕಾರಿ ಡಾ.ಜಯರಾಜ ಸ್ವಾಗತಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು