ಶಿಗ್ಗಾವಿ: ‘ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ನಡೆದಿದೆ. ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿರುವ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ’ ಎಂದು ಕಾಂಗ್ರೆಸ್ ಮುಖಂಡ ಯಾಸಿರಖಾನ್ ಪಠಾಣ ಹೇಳಿದರು.
ಪಟ್ಟಣದ ಅಂಜುಮನ್ ಹಾಲಿನಲ್ಲಿ ಬುಧವಾರ ಕಾಂಗ್ರೆಸ್ ಪಕ್ಷದಿಂದ ನಡೆದ ಬೂತ್‌ಮಟ್ಟದ ಪ್ರಜಾ ಪ್ರತಿನಿಧಿಗಳ ಆಯ್ಕೆ ಸಭೆಯಲ್ಲಿ ಅವರು ಮಾತನಾಡಿ, ಸರ್ಕಾರದ ಯೋಜನೆಗಳು ಯಶಸ್ವಿಯಾಗಲು ಪ್ರತಿಯೊಬ್ಬ ಕಾರ್ಯಕರ್ತರ ಶ್ರಮ ಮುಖ್ಯವಾಗಿದೆ. ಅದರಲ್ಲಿ ಹೆಚ್ಚಿನ ಶ್ರಮ ವಹಿಸುವ ಜತೆಗೆ ಪಕ್ಷದ ತತ್ವ, ಸಿದ್ಧಾಂತಗಳನ್ನು ಹೊಂದಿರುವ ವ್ಯಕ್ತಿಗಳನ್ನು ಆಯ್ಕೆ ಮಾಡಲಾಗುತ್ತಿದೆ. ಅವರ ಮೂಲಕ ಸರ್ಕಾರದ ಯೋಜನೆಗಳನ್ನು ಮನೆ, ಮನೆಗಳಿಗೆ ತಲುಪಿಸುವ ಕಾರ್ಯ ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ವಿಧಾನ ಪರಿಷತ್ ಮಾಜಿ ಸದಸ್ಯ ಸೋಮಣ್ಣ ಬೇವಿನಮರದ ಮಾತನಾಡಿ, ಸೋಲು,ಗೆಲವು ಸಮಾನವಾಗಿ ಸ್ವೀಕರಿಸೋಣ ಯಾವುದೇ ಕಾರ್ಯಕರ್ತರು ಹಿಂಜರಿಯಬೇಡಿ. ಕ್ಷೇತ್ರದಲ್ಲಿನ ವಿವಿಧ ಇಲಾಖೆ ಅಧಿಕಾರಿಗಳು ಜನರಲ್ಲಿ ತಾರತಮ್ಯತೆ ಮಾಡಬಾರದು. ಅರ್ಹ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸಬೇಕು ಎಂದು ಹೇಳಿದರು.
ಮಾಜಿ ಸಂಸದ ಮಂಜುನಾಥ ಕುನ್ನೂರ ಮಾತನಾಡಿ, ಬೂತ್ ಮಟ್ಟದಿಂದ ಪಕ್ಷದಿಂದ ಸರ್ಕಾರದ ಯೋಜನೆಗಳ ಬಗ್ಗೆ ಜನರಿಗೆ ತಿಳಿಸಬೇಕು. ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಮುಟ್ಟಿಸುವ ಕಾರ್ಯವನ್ನು ಪ್ರಾಮಾಣಿಕವಾಗಿ ಮಾಡಬೇಕು ಎಂದು ತಿಳಿಸಿದರು.
ಕಾಂಗ್ರೆಸ್ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಪ್ರೇಮಾ ಪಾಟೀಲ, ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎಂ.ಹಿರೇಮಠ, ತಾಲ್ಲೂಕು ಘಟಕದ ಅಧ್ಯಕ್ಷ ಶಂಭಣ್ಣ ಆಜೂರ, ಸವಣೂರ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಜೆ.ಮುಲ್ಲಾ, ಪುರಸಭೆ ಸದಸ್ಯ ಅಯೊಬಖಾನ್ ಪಠಾಣ, ಮುಖಂಡರಾದ ಶಿವಾನಂದ ರಾಮಗೇರಿ, ಗುರುನಗೌಡ ಪಾಟೀಲ, ಎಸ್.ವಿ.ಪಾಟೀಲ ಸೇರಿದಂತೆ ಅನೇಕರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.