ಸೋಮವಾರ, ಜೂನ್ 21, 2021
29 °C

ಸರ್ಕಾರಿ ನೌಕರರು ಲಸಿಕೆ ಹಾಕಿಸಿಕೊಳ್ಳಿ: ಎಸ್.ವಿ. ಸಂಕನೂರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಕೋವಿಡ್‌ ಎರಡನೇ ಅಲೆಯಿಂದ ರಕ್ಷಿಸಿಕೊಳ್ಳಲು ಜಿಲ್ಲೆಯ ಎಲ್ಲ ಸರ್ಕಾರಿ ನೌಕರರು ಲಸಿಕೆ ಹಾಕಿಸಿಕೊಳ್ಳಲು ವಿಧಾನ ಪರಿಷತ್ ಸದಸ್ಯರು ಎಸ್.ವಿ. ಸಂಕನೂರ ಕರೆ ನೀಡಿದರು.

ಜಿಲ್ಲಾ ಗುರುಭವನದಲ್ಲಿ ಶುಕ್ರವಾರ ನಡೆದ ಕೋವಿಡ್ ಜಾಗೃತಿ ಕಾರ್ಯಕ್ರಮದಲ್ಲಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. 

ಜಿಲ್ಲೆಯ ಸರ್ಕಾರಿ ನೌಕರರು ಶೇಕಡಾ 100ರಷ್ಟು ಲಸಿಕೆ ಹಾಕಿಸಿಕೊಂಡು ತಮ್ಮ ಕುಟುಂಬ ಪರಿವಾರದವರಿಗೂ ಹಾಕಿಸಲು ತಿಳಿಸಿದರು. ಎಲ್ಲರೂ ಕೋವಿಡ್‌ ರೋಗದಿಂದ ದೂರ ಉಳಿಯಲು ಮುಂಜಾಗ್ರತೆ ವಹಿಸಿ. ಜನತಾ ಕರ್ಫ್ಯೂ ಇದ್ದಾಗಲೂ 45 ವರ್ಷ ಮೀರಿದ ಎಲ್ಲರೂ ಲಸಿಕೆಯನ್ನು ಹಾಕಿಸಿಕೊಳ್ಳಲಿಕ್ಕೆ ಅವಕಾಶ ಮಾಡಿಕೊಡಲಾಗಿದೆ. ಈ ಲಸಿಕಾ ಅಭಿಯಾನವನ್ನು ಎಲ್ಲ ನೌಕರರು ಅಧಿಕಾರಿಗಳು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು. 

ಡಿಡಿಪಿಐ ಅಂದಾನಪ್ಪ ವಡಗೇರಿ, ಡಿಡಿಪಿಯು ನಾಗರಾಜಪ್ಪ, ಬಿಇಒ ಎಂ.ಎಚ್. ಪಾಟೀಲ, ಹಾವೇರಿ ಕ.ರಾ.ಸ.ನೌ.ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಅಮೃತಗೌಡ ಬ. ಪಾಟೀಲ, ಸಮನ್ವಯಾಧಿಕಾರಿ ಸಿ.ಎಸ್. ಭಗವಂತಗೌಡ್ರ, ಕ.ರಾ.ಪ್ರಾ.ಶಾ.ಶಿ. ಸಂಘ ರಾಜ್ಯ ಸಂಘಟನಾ ಕಾರ್ಯದರ್ಶಿ ಪಿ.ಟಿ. ಕಾಮನಹಳ್ಳಿ, ರಾಜ್ಯ ಉಪಾಧ್ಯಕ್ಷರು ಜೆ.ಆರ್. ಯಲವದಹಳ್ಳಿ, ಪ್ರಧಾನ ಕಾರ್ಯದರ್ಶಿ ಎಂ.ಎ. ಎಣ್ಣಿ, ಗೌರವಾಧ್ಯಕ್ಷರು ಎಚ್.ಡಿ. ಗಂಟೇರ, ಸಿ.ಜಿ. ಬ್ಯಾಡಗಿ ಇದ್ದರು. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು